ಮಂಗಳೂರು : ಪೊಲೀಸ್ ಪೇದೆ ನೇಣು ಬಿಗಿದು ಆತ್ಮ ಹತ್ಯೆ

Spread the love

ಮಂಗಳೂರು : ಪೊಲೀಸ್ ಪೇದೆ ನೇಣು ಬಿಗಿದು ಆತ್ಮ ಹತ್ಯೆ

ಮಂಗಳೂರು: ಪೊಲೀಸ್ ಕಾನ್ ಸ್ಟೇಬಲ್ ಒಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಮೇರಿಹಿಲ್ ಬಳಿ ನಡೆದಿದೆ.

ಕದ್ರಿ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ ಸ್ಟೇಬಲ್ ಲೋಕನಾಥ್ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅನಾರೋಗ್ಯದ ಕಾರಣ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದ್ದು, ಘಟನೆ ನಡೆದಾಗ ಮನೆಯಲ್ಲಿ ಯಾರೂ ಇರಲಿಲ್ಲ ಎನ್ನಲಾಗಿದೆ.

ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love