ಮಂಗಳೂರು: ಪೊಲೀಸ್ ಹುತಾತ್ಮರ ದಿನಾಚರಣೆ

ಮಂಗಳೂರು: ಪೊಲೀಸ್ ಹುತಾತ್ಮರ ದಿನಾಚರಣೆ

ಮಂಗಳೂರು : ಮಂಗಳೂರು ನಗರ ಪೊಲೀಸ್ ಹಾಗೂ ದ.ಕ. ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಸೋಮವಾರ ‌ಪೊಲೀಸ್ ಪೆರೇಡ್ ಮೈದಾನದಲ್ಲಿ ಪೊಲೀಸ್ ಹುತಾತ್ಮ‌ದಿನ ಅಚರಿಸಲಾಯಿತು.

ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸರ ಹೆಸರು ವಾಚಿಸಲಾಯಿತಲ್ಲದೆ‌, ಅವರ ಸೇವೆಯನ್ನು‌ ಸ್ಮರಿಸಲಾಯಿತು.

ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಸತ್ಯನಾರಾಯಣ ಆಚಾರ್ಯ, ಪಶ್ಚಿಮ ವಲಯ ಐಜಿಪಿ‌ ಅರುಣ್ ಚಕ್ರವರ್ತಿ, ಪೊಲೀಸ್ ಆಯುಕ್ತ ಡಾ.ಪಿ.ಎಸ್. ಹರ್ಷ, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿಪ್ರಸಾದ್, ಮನಪಾ ಆಯುಕ್ತ ಶಾನಾಡಿ‌ ಅಜಿತ್‌ ಕುಮಾರ್ ಹೆಗ್ಡೆ ಮತ್ತಿತರರು ಪಾಲ್ಗೊಂಡಿದ್ದರು.

Leave a Reply

  Subscribe  
Notify of