ಮಂಗಳೂರು: ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಸಮೀಪದ ಕುಂಪಲದಲ್ಲಿ ಬುಧವಾರ ನಡೆದಿದೆ.
ಮೃತಪಟ್ಟ ಯುವತಿಯನ್ನು ಜ್ಯೋತಿ (17) ಎಂದು ಗುರುತಿಸಲಾಗಿದೆ.
ಪ್ರಾಥಮಿಕ ಮೂಲಗಳ ಪ್ರಕಾರ ಜ್ಯೋತಿಯೊಂದಿಗೆ ಪೋಲಿಸ್ ಒರ್ವರು ಫೇಸ್ ಬುಕ್ ಮೂಲಕ ಪರಿಚಯವಾಗಿದ್ದು, ಪ್ರತಿನಿತ್ಯ ಹಣ ಹಾಗೂ ಚಿನ್ನಕ್ಕಾಗಿ ಪೀಡಿಸುತ್ತಿದ್ದರು ಎನ್ನಲಾಗಿದೆ. ಇದರಿಂದ ಬೇಸತ್ತ ಯುವತಿ ಮನೆಯಲ್ಲಿ ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಡೆತ್ ನೋಟ್ ಲಭಿಸಿದ್ದು ಉಳ್ಳಾಲ ಪೋಲಿಸರು ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೊಂಡಿದ್ದಾರೆ.
