ಮಂಗಳೂರು : ಪ.ಗೋ.ಪ್ರಶಸ್ತಿಗೆ ಅರ್ಜಿ ಆಹ್ವಾನ

Spread the love

ಮಂಗಳೂರು : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುತ್ತಿರುವ ಪ.ಗೋ.ಸಂಸ್ಮರಣಾ ಗ್ರಾಮೀಣ, ಮಾನವೀಯ ಹಾಗೂ ಅಭಿವೃದ್ಧಿಪರ ವರದಿಗಾರಿಕೆ ಪ್ರಶಸ್ತಿ (ಪ.ಗೋ. ಪ್ರಶಸ್ತಿ)ಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆÉ. ದ.ಕ., ಉಡುಪಿ,ಉತ್ತರ ಕನ್ನಡ,ಕೊಡಗು, ಚಿಕ್ಕಮಗಳೂರು ಹಾಗೂ ಕಾಸರಗೋಡು ಜಿಲ್ಲೆಗಳ ಕನ್ನಡ ಯುವ ಪತ್ರಕರ್ತರು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವವರ ವಯಸ್ಸು 45ಕ್ಕೆ ಮೀರಿರಬಾರದು. ಗ್ರಾಮೀಣ, ಮಾನವೀಯ ಮತ್ತು ಅಭಿವೃದ್ಧಿಪರ ವರದಿಗಳನ್ನು ಮಾತ್ರ ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿ 10 ಸಾವಿರ ರೂ. ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ಒಳಗೊಂಡಿದೆ. 2015 ನೇ ಸಾಲಿನ ಪ್ರಶಸ್ತಿಗೆ 2015ರ ಜನವರಿ 1ರಿಂದ ಡಿಸೆಂಬರ್ 31ರವರೆಗಿನ ವರದಿಗಳನ್ನು ಪರಿಗಣಿಸಲಾಗುವುದು. ಪ್ರಶಸ್ತಿಗಾಗಿ ಅರ್ಜಿಸಲ್ಲಿಸುವವರು ವರದಿಯ ನಾಲ್ಕು ಪ್ರತಿಗಳನ್ನು(ಒಂದು ಮೂಲಪ್ರತಿ ಕಡ್ಡಾಯ) ಸಲ್ಲಿಸಬೇಕು. ವರದಿ ಪ್ರಕಟವಾದ ದಿನಾಂಕದ ಕುರಿತಂತೆ ಸೂಕ್ತ ದಾಖಲೆ ಅಗತ್ಯ. ಅರ್ಜಿಗಳನ್ನು ಕಳುಹಿಸಲು ಜನವರಿ 31 ಕೊನೆಯ ದಿನಾಂಕವಾಗಿದೆ. ಪ್ರಧಾನ ಕಾರ್ಯದರ್ಶಿ , ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಪತ್ರಿಕಾ ಭವನ, ಉರ್ವಮಾರ್ಕೆಟ್ ಮಂಗಳೂರು -6 ಇಲ್ಲಿಗೆ ಕಳುಹಿಸುವಂತೆ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯಕ್ ಇಂದಾಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love