ಮಂಗಳೂರು ಬಂದರು ದಕ್ಕೆ ಪ್ರದೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೊ ಮತ ಯಾಚನೆ.

Spread the love

ಮಂಗಳೂರು ಬಂದರು ದಕ್ಕೆ ಪ್ರದೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೊ ಮತ ಯಾಚನೆ.

 

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀ.ಜೆ.ಆರ್.ಲೋಬೊರವರು ಬಂದರು ದಕ್ಕೆ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಲೋಬೊರವರು ಆ ಪ್ರದೇಶದಲ್ಲಿ ಮೀನು ವ್ಯಾಪಾರ ಮಾಡುವ ನೂರಕ್ಕೂ ಅಧಿಕ ಜನ ವ್ಯಾಪಾರಸ್ಥರನ್ನು ಭೇಟಿ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಗೆಲ್ಲಿಸಬೇಕೆಂದು ಮನವಿ ಮಾಡಿದರು. ತದನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಲೋಬೊರವರು ಕಳೆದ 5 ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷ ಮಾಡಿದಂತಹ ಕಾರ್ಯಕ್ರಮಗಳನ್ನು ಜನರು ಮೆಚ್ಚಿಕೊಂಡಿದ್ದಾರೆ.

ಪ್ರತಿಪಕ್ಷಗಳು ಕಾಂಗ್ರೆಸ್ ಪಕ್ಷದ ಮೇಲೆ ಗೂಬೆ ಕೂರಿಸುವಂತಹಾ ಕೆಲಸದಲ್ಲಿ ನಿರತರಾಗಿದ್ದಾರೆ.ಕಾಂಗ್ರೆಸ್ ಸರಕಾರದ ಕಾರ್ಯವೈಕರಿಯನ್ನು ಜೀರ್ಣಿಸಿಕೊಳ್ಳಲು ಅವರಿಂದ ಸಾಧ್ಯವಾಗುತ್ತಿಲ್ಲ.ಖಂಡಿತವಾಗಿಯೂ ಈ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುತ್ತಾರೆ ಎಂದರು.

ಈ ಸಂದರ್ಭದಲ್ಲಿ ಕಾರ್ಪೋರೇಟರ್ ಗಳಾದ ಲತೀಫ್ ಕಂದಕ್, ಕವಿತಾವಾಸು, ಅಸ್ಲಂ,ಸಂಶುದ್ಧಿನ್, ಸಿ.ಯಂ.ಮುಸ್ತಾಫಾ, ಸರಳಾ ಕರ್ಕೇರ, ಸರಿತಾ ಬೆಂಗ್ರೆ, ಮಜೀದ್, ಸುಧಾಕರ್ ಶೆಣೈ ಮುಂತಾದವರು ಉಪಸ್ಥಿತರಿದ್ದರು.


Spread the love