ಮಂಗಳೂರು ಬಾಂಬ್ ಸ್ಪೋಟ: ಮೈಸೂರು ನಂಟು?

Spread the love

ಮಂಗಳೂರು ಬಾಂಬ್ ಸ್ಪೋಟ: ಮೈಸೂರು ನಂಟು?

ಮೈಸೂರು: ಮಂಗಳೂರಿನಲ್ಲಿ ನಡೆದ ಆಟೋ ಸ್ಪೋಟ ಪ್ರಕರಣದ ಶಂಕಿತನಿಗೆ ಮೈಸೂರಿನಲ್ಲಿ ನೆಲೆಸಿದ್ದ ಎಂಬುದು ತನಿಖೆ ವೇಳೆ ಬೆಳಕಿಗೆ ಬಂದಿದೆ.

ಮೇಟಗಳ್ಳಿ ಬಳಿಯ ಲೋಕ ನಾಯಕ ನಗರದ ಸಂಜೀವಿನಿ ರಸ್ತೆಯಲ್ಲಿನ ಮೋಹನಕುಮಾರ್ ಮಾಲೀಕತ್ವದ ಬಾಡಿಗೆ ಮನೆಯಲ್ಲಿ ಕೆಲ ತಿಂಗಳಿನಿಂದ ವಾಸವಿದ್ದ. ಮನೆ ಬಾಡಿಗೆ ಪಡೆಯಲು ಶಂಕಿತ ತಾನು ಪ್ರೇಮ್ ರಾಜ್ ಹೆಸರಿನಲ್ಲಿ ಹುಬ್ಬಳ್ಳಿ ವಿಳಾಸದ ನಕಲಿ ಆಧಾರ್ ಕಾರ್ಡ್ ಸಿದ್ದಪಡಿಸಿಕೊಂಡು ನೀಡಿದ್ದ ಎಂದು ತಿಳಿದು ಬಂದಿದೆ. ಈ ಬಗ್ಗೆ ಖಚಿತ ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸರು ಶಂಕಿತ ಇದ್ದ ಮನೆಗೆ ಭೇಟಿ ನೀಡಿ, ಮನೆ ಮಾಲೀಕರೊಂದಿಗೆ ನೆರೆಹೊರೆಯವರಿಗೆ ಮಾಹಿತಿ ಪಡೆದಿದ್ದಾರೆ.

ಶಂಕಿತ ಬಾಡಿಗೆ ಪಡೆದಿರುವ ಮನೆಯಲ್ಲಿ ಶೋಧ ಕಾರ್ಯ ನಡೆಸಿದ ಪೊಲೀಸರಿಗೆ ಸರ್ಕಿಟ್ ಬೋರ್ಡ್, ಸ್ಮಾಲ್ ಬೋಲ್ಟ್, ಬ್ಯಾಟರಿ, ಮೊಬೈಲ್, ವುಡೆನ್ ಪೌಡರ್, ಅಲ್ಯೂಮಿನಿಯಂ, ಮಲ್ಟಿ ಮೀಟರ್, ವೈರ್, ಪ್ರೆಶರ್ ಕುಕ್ಕರ್ ಸೇರಿದಂತೆ ಹಲವು ಸ್ಪೋಟಕ ವಸ್ತುಗಳು ಪತ್ತೆಯಾಗಿವೆ. ಇದರೊಂದಿಗೆ ಒಂದು ಮೊಬೈಲ್, ಎರಡು ನಕಲಿ ಆಧಾರ್ ಕಾರ್ಡ್, ಒಂದು ನಕಲಿ ಪ್ಯಾನ್ ಕಾರ್ಡ್, ಒಂದು ಫಿನೋ ಡೆಬಿಟ್ ಕಾರ್ಡ್ ಸಿಕ್ಕಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ಶಂಕಿತ ಮೈಸೂರು ನಗರದ ಅಗ್ರಹಾರದಲ್ಲಿರುವ ಮೊಬೈಲ್ ಅಂಗಡಿಯಲ್ಲಿ ಕೆಲ ತಿಂಗಳ ಮೊಬೈಲ್ ರಿಪೇರಿಯ ತರಬೇತಿ ಕಾರ್ಯದಲ್ಲಿ ಇದ್ದ ಎಂಬುದು ಗೊತ್ತಾಗಿದೆ. ಶಂಕಿತ ಉದ್ದ ಬಾಡಿಗೆ ಮನೆ ಮತ್ತು ಮೊಬೈಲ್ ಅಂಗಡಿಗೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರಲ್ಲದೆ ಶಂಕಿತ ಉಗ್ರ ಮಂಗಳೂರಿನಲ್ಲಿ ಸ್ಪೋಟಿಸಿದ ಕುಕ್ಕರ್ ಬಾಂಬ್ ಅನ್ನು ಮೈಸೂರಿನಿಂದ ಮಂಗಳೂರಿಗೆ ಬಸ್ನಲ್ಲಿ ತೆಗೆದು ಕೊಂಡು ಹೋಗಿದ್ದ ಎಂದು ತಿಳಿದು ಬಂದಿದೆ.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮಾತನಾಡಿ ಮೈಸೂರಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾವಹಿಸಲಾಗಿದ್ದು, ಸೂಕ್ತ ಬಂದೋ ಬಸ್ತ್ ಕೈಗೊಳ್ಳಲಾಗಿದೆ ಎಂದು ಹೇಳಿದರು. ಈ ಸಂಬಂಧ ನಗರ ಪೊಲೀಸ್ ಆಯುಕ್ತರೊಂದಿಗೆ ಚರ್ಚೆ ನಡೆಸಲಾಗಿದೆ. ಅಗತ್ಯ ಬಿಗಿ ಭದ್ರತೆ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಮಂಗಳೂರಿನಲ್ಲಿ ಈಗಾಗಲೇ ಕಟ್ಟುನಿಟ್ಟಿನ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಮಂಗಳೂರಿಗೆ ಈಗಾಗಲೇ ಮುಖ್ಯಮಂತ್ರಿ ಭೇಟಿ ಕೊಟ್ಟಿದ್ದಾರೆ. ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಎಲ್ಲಾ ರೀತಿಯ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದರು.

ನಗರ ಪೊಲೀಸ್ ಆಯುಕ್ತ ರಮೇಶ್.ಬಿ ಪ್ರತಿಕ್ರಿಯೆ ನೀಡಿ, ಮಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ನಡೆದ ಸ್ಪೋಟ ಪ್ರಕರಣ ಸಂಬಂಧ ನಗರದಲ್ಲಿ ಪರಿಶೀಲನೆ ನಡೆಯುತ್ತಿದೆ. ಹೆಚ್ಚಿನ ಮಾಹಿತಿಯನ್ನು ಎಡಿಜಿಪಿ ಸುದ್ದಿಗೋಷ್ಠಿ ನಡೆಸುವ ಮೂಲಕ ಮಾಹಿತಿ ನೀಡಲಿದ್ದಾರೆ ಎಂದಿದ್ದಾರೆ.


Spread the love

Leave a Reply

Please enter your comment!
Please enter your name here