ಮಂಗಳೂರು ಬಿಷಪ್ ಹೌಸ್ ಗೆ ಡಿ ಕೆ ಶಿವಕುಮಾರ್ ಭೇಟಿ

Spread the love

ಮಂಗಳೂರು ಬಿಷಪ್ ಹೌಸ್ ಗೆ ಡಿ ಕೆ ಶಿವಕುಮಾರ್ ಭೇಟಿ

ಮಂಗಳೂರು: ಮಂಗಳೂರು ಪ್ರವಾಸದಲ್ಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಮಂಗಳೂರಿನ ಬಿಷಪ್ ಹೌಸ್ ಗೆ ಶುಕ್ರವಾರ ಭೇಟಿ ನೀಡಿದರು.

ಮಂಗಳೂರು ಕೆಥೊಲಿಕ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಪೀಟರ್ ಪಾವ್ಲ್ ಸಲ್ಡಾನಾ ಅವರು ಡಿ ಕೆ ಶಿವಕುಮಾರ್ ಅವರನ್ನು ಬರಮಾಡಿಕೊಂಡು ಧರ್ಮಪ್ರಾಂತ್ಯದ ಕ್ರೈಸ್ತ ಬಂಧುಗಳ ಪರವಾಗಿ ಸನ್ಮಾನಿಸಿದರು.

ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ಕಾಂಗ್ರೆಸ್ ದ.ಕ. ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ರಮಾನಾಥ ರೈ, ಶಾಸಕ ಯು.ಟಿ. ಖಾದರ್, ಮಾಜಿ ಶಾಸಕರಾದ ಅಭಯ ಚಂದ್ರ ಜೈನ್, ಐವನ್ ಡಿಸೋಜ, ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಹಾಗೂ ಇತರರು ಉಪಸ್ಥಿತರಿದ್ದರು.


Spread the love