ಮಂಗಳೂರು ಭೇಟಿಯ ಕುರಿತು ಕನ್ನಡದಲ್ಲಿ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡ ಪ್ರಧಾನಿ ಮೋದಿ

Spread the love

ಮಂಗಳೂರು ಭೇಟಿಯ ಕುರಿತು ಕನ್ನಡದಲ್ಲಿ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡ ಪ್ರಧಾನಿ ಮೋದಿ

ಮಂಗಳೂರು: ಸೆಪ್ಟೆಂಬರ್‌ 2 ರಂದು ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರಿಗೆ ಆಗಮಿಸಲಿದ್ದು ತಾವು ಭಾಗವಹಿಸಲಿರುವ ವಿವಿಧ ಯೋಜನೆಗಳ ಲೋಕಾರ್ಪಣೆ ಮತ್ತು ಶಿಲನ್ಯಾಸದ ಕುರಿತು ತಮ್ಮ ಅಧಿಕೃತ ಖಾತೆಯಲ್ಲಿ ಕನ್ನಡದಲ್ಲಿ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.

ನಾಳೆ, ಸೆಪ್ಟೆಂಬರ್‌ 2 ರಂದು ಮಂಗಳೂರಿನ ಸೋದರಿಯರು ಮತ್ತು ಸೋದರರೊಂದಿಗೆ ಇರುವ ಸಂದರ್ಭವನ್ನು ಎದುರು ನೋಡುತ್ತಿರುವೆ. 3,800 ಕೋಟಿ ರೂಪಾಯಿ ಮೌಲ್ಯದ ಪ್ರಮುಖ ಯೋಜನೆಗಳ ಉದ್ಘಾಟನೆ ಅಥವಾ ಶಿಲಾನ್ಯಾಸ ನೆರವೇರಿಸಲಾಗುವುದು. ಈ ಮುಖ್ಯವಾದ ಯೋಜನೆಗಳು ಯಾಂತ್ರೀಕರಣ ಮತ್ತು ಕೈಗಾರಿಕೀಕರಣಕ್ಕೆ ಸಂಬಂಧಿಸಿದ್ದಾಗಿವೆ ಎಂದು ತಮ್ಮ ಟ್ವೀಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.


Spread the love