ಮಂಗಳೂರು: ಮಾ. 11ರಂದು ಸರ್ಕಾರಿ ನೌಕರರ ಕ್ರೀಡಾಕೂಟ 

Spread the love

ಮಂಗಳೂರು: ಮಾ. 11ರಂದು ಸರ್ಕಾರಿ ನೌಕರರ ಕ್ರೀಡಾಕೂಟ 

ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಮಾ.11ರ ಶುಕ್ರವಾರ ಬೆಳಿಗ್ಗೆ 10.30ಕ್ಕೆ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಸರ್ಕಾರಿ ನೌಕರರ ಕ್ರೀಡಾ ಕೂಟ ನಡೆಯಲಿದ್ದು, ಇಂಧನ, ಕನ್ನಡ ಹಾಗೂ ಸಂಸ್ಕøತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನೀಲ್ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸುವರು.

ಶಾಸಕರಾದ ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸಲಿದ್ದು, ಸರ್ಕಾರಿ ನೌಕರರ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಅವರು ಮತ್ತು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಎಸ್.ಅಂಗಾರ ಅವರ ಘನ ಉಪಸ್ಥಿತಿ ವಹಿಸುವರು, ಸಂಸದರಾದ ನಳಿನ್ ಕುಮಾರ್ ಕಟೀಲ್ ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅವರು ಗೌರವ ಉಪಸ್ಥಿತಿವಹಿಸುವರು.

ಮುಖ್ಯ ಅತಿಥಿಗಳಾಗಿ ಶಾಸಕರಾದ ಯು.ಟಿ ಖಾದರ್, ಸಂಜೀವ ಮಠಂದೂರು, ಉಮಾನಾಥ್ ಕೋಟ್ಯಾನ್, ಡಾ. ವೈ ಭರತ್ ಶೆಟ್ಟಿ, ರಾಜೇಶ್ ನಾಯಕ್, ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಬಿ.ಎಂ. ಫಾರೂಕ್, ಹರೀಶ್ ಕುಮಾರ್, ಆಯನೂರ್ ಮಂಜುನಾಥ್, ಎಸ್.ಎಲ್. ಭೋಜೆಗೌಡ, ಮಂಜುನಾಥ್ ಭಂಡಾರಿ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಉಪ ಮಹಾಪೌರರಾದ ಸುಮಂಗಳಾ ರಾವ್, ಮಹಾನಗರ ಪಾಲಿಕೆ ಸದಸ್ಯರಾದ ಸಂಧ್ಯಾ ಎಂ.ಆಚಾರ್ ಹಾಗೂ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ

ಮಾ. 12 ರಂದು ಸರ್ಕಾರಿ ನೌಕರರ ಸಭಾ ಭವನದಲ್ಲಿ ಸಾಂಸ್ಕøತಿಕ ಕಾರ್ಯಕ್ರಮ ಬೆಳಿಗೆ 9 ಗಂಟೆಯಿಂದ ಆರಂಭವಾಗಲಿದೆ.


Spread the love