ಮಂಗಳೂರು: ಮಾ. 12ರಂದು ಮೆಗಾ ಲೋಕ್ ಅದಾಲತ್ 

Spread the love

ಮಂಗಳೂರು: ಮಾ. 12ರಂದು ಮೆಗಾ ಲೋಕ್ ಅದಾಲತ್ 

ಮಂಗಳೂರು:  ಇದೇ ಮಾ.12ರ ಶನಿವಾರ ರಾಜ್ಯಾದ್ಯಂತ ಮೆಗಾ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಅಂದು ನಡೆಯಲಿರುವ ಮೆಗಾ ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕರು ಭಾಗವಹಿಸಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ ಕಲ್ಪಿಸಿಕೊಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿಗಳಿಗೆ ಆನ್‍ಲೈನ್ ಅಥವಾ ವಿಡಿಯೋ ಕಾನ್ಪರೆನ್ಸ್ ಅಥವಾ ಇ-ಮೇಲ್ ಅಥವಾ ಎಸ್‍ಎಂಎಸ್ ಅಥವಾ ವಾಟ್ಸ್ ಅಪ್ ಅಥವಾ ಎಲೆಕ್ಟ್ರಾನಿಕ್ ಮೋಡ್ ಅಥವಾ ಖುದ್ದಾಗಿ ಹಾಜರಾಗಿ ಮಾಹಿತಿ ಪಡೆಯಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪೃಥ್ವಿರಾಜ್ ವರ್ಣೇಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love