
ಮಂಗಳೂರು – ಮುಂಬೈ ಎಕ್ಸ್ ಪ್ರೆಸ್ ರೈಲಿನಲ್ಲಿ ಕಳ್ಳತನ: 8 ಗಂಟೆಯಲ್ಲಿ ಆರೋಪಿಗಳನ್ನು ಬಂಧಿಸಿದ ಮಣಿಪಾಲ ಪೊಲೀಸರು
ಉಡುಪಿ: ಉಡುಪಿ: ಮಂಗಳೂರು ಮುಂಬೈ ಎಕ್ಸ್ ಪ್ರೆಸ್ ರೈಲಿನಲ್ಲಿ ನಡೆದ ಚಿನ್ನಾಭರಣ ಕಳವು ಪ್ರಕರಣವನ್ನು ಮಣಿಪಾಲ ಪೊಲೀಸರು ಕ್ಷಿಪ್ರಗತಿಯಲ್ಲಿ ಭೇಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಲಲಿತಾ ಬೋವಿ (41) ಮತ್ತು ಸುಶೀಲಮ್ಮ ಬೋವಿ (64) ಎಂದು ಗುರುತಿಸಲಾಗಿದೆ.
ಮಾರ್ಚ್ 14 ರಂದು ಕಾಪು ಕುತ್ಯಾರು ನಿವಾಸಿ ಪುನೀತ್ ವಸಂತ್ ಹೆಗ್ಡೆ ತಮ್ಮ ಕುಟುಂಬದೊಂದಿಗೆ ಮುಂಬೈಗೆ ಹೋಗಲು ಮಂಗಳೂರು- ಮುಂಬೈ ಎಕ್ಸ ಪ್ರೆಸ್ ರೈಲಿನಲ್ಲಿ ಹೊರಟಿದ್ದು, ತಮ್ಮ ವ್ಯಾನಿಟಿ ಬ್ಯಾಗ್ ನಲ್ಲಿ ಬಂಗಾರದ ಒಡವೆಗಳನ್ನು ಒಂದು ಕವರ್ ನಲ್ಲಿ ಹಾಕಿ ಬಟ್ಟೆಗಳ ಮಧ್ಯೆ ಇಟ್ಟಿದ್ದು, ಬ್ಯಾಗನ್ನು ಹೆಗಲಿನಲ್ಲಿ ಹಾಕಿಕೊಂಡಿದ್ದು, ಇಂದ್ರಾಳಿ ರೈಲು ನಿಲ್ದಾಣದಿಂದ ರೈಲು ಹೊರಟಿದ್ದು ಸೀಟ್ ನಲ್ಲಿ ಕುಳಿತಾಗ ಪುನೀತ್ ವ್ಯಾನಿಟಿ ಬಾಗ್ ಜಿಪ್ ತೆರೆದಿರುವುದು ಕಂಡು ಬಂದಿದ್ದು, ಬಾಗ್ ಪರಿಶೀಲಿಸಿದಾಗ ಬ್ಲಾಗ್ ನ ಒಳಗೆ ಇಟ್ಟಿದ್ದ ಬಂಗಾರದ ಒಡವೆಗಳ ಕವರ್ ಕಾಣೆಯಾಗಿರುತ್ತದೆ, ಪುನೀತ್ ಅವರು ಇಂದ್ರಾಳಿ ರೈಲು ನಿಲ್ದಾಣದಲ್ಲಿ, ರೈಲು ಹತ್ತುವ ಸಮಯ ಯಾರೋ ಕಳ್ಳರು ವ್ಯಾನಿಟಿ ಬ್ಯಾಗ್ ಚಿಪ್ ನ್ನು ತೆರೆದು ಬ್ಲಾಗ್ ನಲ್ಲಿದ್ದ ಬಂಗಾರದ ಒಡವೆಗಳನ್ನು ಹಾಗೂ ವಾಚ್ ನ್ನು ಕಳವು ಮಾಡಿದ್ದು, ಕಳುವಾದ ಚಿನ್ನಾಭರಣಗಳ ಅಂದಾಜು ತೂಕ 100 ಗ್ರಾಂ ಆಗಿದ್ದು, ಅಂದಾಜು ಮೌಲ್ಯ ಸುಮಾರು 4,00,000/- ಆಗಿರುತ್ತದೆ, ಹಾಗೂ ಕಳುವಾದ ವಾಚ್ ನ ಅಂದಾಜು ಬೆಲೆ 3000/- ಆಗಿರುತ್ತದೆ, ಕಳುವಾದ ಸ್ವತ್ತುಗಳ ಒಟ್ಟು ಮೌಲ್ಯ 4,03,000/- ರೂ ಆಗಿದ್ದು ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣ ದಾಖಲಾದ ತಕ್ಷಣ ಪ್ರಕರಣದ ಆರೋಪಿಯ ಪತ್ತೆ ಬಗ್ಗೆ ಮಣಿಪಾಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರ ನೇತೃತ್ವದಲ್ಲಿ, ಪಿಎಸ್ಐ ನವೀನ್ ನಾಯ್ಕ ಎ.ಎಸ್.ಐ ಶೈಲೇಶ್ ಹೆಚ್ ಸಿ ಇಮ್ರಾನ್, ಶುಭ ಅರುಣಾ ಚಾಳೇಕರ ತಂಡ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ರೈಲ್ವೆ ಪೊಲೀಸರ ಸಹಕಾರದೊಂದಿಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳ ಮಾಹಿತಿ ಪಡೆದು ಅದರ ಆಧಾರದ ಮೇಲೆ ತಕ್ಷಣ ಕಾರ್ಯಾಚರಣೆ ನಡೆಸಿ ಘಟನೆ ನಡೆದ 8 ಗಂಟೆಗಳ ಒಳಗೆ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ, ಯಶಸ್ವಿಯಾಗಿರುತ್ತಾರೆ, ಆರೋಪಿತರಿಂದ ಕಳುವಾದ 4,03,000/- ರೂ ಮೌಲ್ಯದ 100 ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ, ಯಶಸ್ವಿಯಾಗಿದ್ದಾರೆ,
ಸದರಿ ಆರೋಪಿತರು ಭದ್ರಾವತಿ ಮೂಲದವರಾಗಿದ್ದು, ಗಮನ ಬೇರೆಡೆ ಸೆಳೆದು ಕಳ್ಳತನ ಮಾಡುವುದು, ಪಿಕ್ ಪಾಕೆಟ್ ಹಾಗೂ ಜನಸಂದಣಿಯಲ್ಲಿ ಹಿರಿಯ ನಾಗರಿಕರನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುವ ಚಾಳಿ ಉಳ್ಳವರಾಗಿರುವುದು ತನಿಖೆಯಿಂದ ಕಂಡು ಬಂದಿರುತ್ತದೆ. ಇವರ ವಿರುದ್ಧ ಈ ಹಿಂದೆ ದಾವಣಗೆರೆ ಜಿಲ್ಲೆ, ಯ ಹೊನ್ನಾಳಿ ಪೊಲೀಸ್ ಠಾಣೆ ಸೇರಿದಂತೆ ರಾಜ್ಯದ ಇತರ ಕಡೆಗಳಲ್ಲಿ ಪ್ರಕರಣ ದಾಖಲಾಗಿರುವುದು ಕಂಡು ಬಂದಿರುತ್ತದೆ, ಆರೋಪಿತರನ್ನು ದಸ್ತಗಿರಿ ಮಾಡಿ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡು ಮಾತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಸದರಿ ಪ್ರಕರಣವನ್ನು ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ, ಭೇಧಿಸಿದ ಮಣಿಪಾಲ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪೊಲೀಸ್ ಅಧಿಕ್ಷಕರಾದ ಅಕ್ಷಯ್ ಮಚಂದ್ರ ಹಾಕೆ ಐಪಿಎಸ್ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸಿದ್ಧಲಿಂಗಪ್ಪ ಟಿ ಕೆ.ಎಸ್.ಪಿ.ಎಸ್ ಮತ್ತು, ದಿನಕರ ಕೆ.ಪಿ, ಡಿ.ವೈ.ಎಸ್.ಪಿ ಉಡುಪಿ ರವರು ಪ್ರಶಂಸೆ ವ್ಯಕ್ತಪಡಿಸಿರುತ್ತಾರೆ.