ಮಂಗಳೂರು: ರನ್ ವೇಯಿಂದ ಜಾರಿದ ಏರ್ ಇಂಡಿಯಾ ವಿಮಾನ – ಪ್ರಯಾಣಿಕರು ಸುರಕ್ಷಿತ

ಮಂಗಳೂರು: ರನ್ ವೇಯಿಂದ ಜಾರಿದ ಏರ್ ಇಂಡಿಯಾ ವಿಮಾನ – ಪ್ರಯಾಣಿಕರು ಸುರಕ್ಷತೆ

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನ ರನ್ ವೇನಿಂದ ಜಾರಿ ಸಾಕಷ್ಟು ಮುಂದೆ ಬಂದು ಲ್ಯಾಂಡ್ ಆದ ಘಟನೆ ಭಾನುವಾರ ಸಂಜೆ ಸಂಭವಿಸಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನ ರನ್ ವೇನಿಂದ ಜಾರಿ ಸಾಕಷ್ಟು ಮುಂದೆ ಬಂದು ಲ್ಯಾಂಡ್ ಆಗಿದೆ. ದುಬೈನಿಂದ ಮಂಗಳೂರಿಗೆ ಆಗಮಿಸಿದ ಏರ್ ಇಂಡಿಯಾ ವಿಮಾನ ಇದಾಗಿದ್ದು, ಪೈಲೆಟ್ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ ತಪ್ಪಿದೆ. ವಿಮಾನದಲ್ಲಿದ್ದ ಎಲ್ಲಾ 189 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎನ್ನಲಾಗಿದೆ.

ಸದ್ಯ ಮಂಗಳೂರು ವಿಮಾನ ನಿಲ್ದಾಣದ ಎಲ್ಲಾ ಚಟುವಟಿಕೆ ಸಂಪೂರ್ಣ ಸ್ಥಗಿತಗೊಂಡಿದ್ದು, ವಿಮಾನ ಹಾರಾಟ ಮತ್ತು ಆಗಮನ ಸ್ಥಗಿತಗೊಳಿಸಲಾಗಿದೆ. ರನ್ ವೇ ದಾಟಿ ಸಾಕಷ್ಟು ಎದುರು ಬಂದು ವಿಮಾನ ಲ್ಯಾಂಡಿಂಗ್ ಆಗಿದ್ದು, ದುರಂತ ತಪ್ಪಿದ ಹಿನ್ನೆಲೆ 183 ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ