ಮಂಗಳೂರು: ರಸ್ತೆಯಲ್ಲಿ ನಮಾಝ್ ಮಾಡಿದ ಆರೋಪ; ಸ್ವಯಂ ಪ್ರೇರಿತ ಪ್ರಕರಣ ದಾಖಲು

Spread the love

ಮಂಗಳೂರು: ರಸ್ತೆಯಲ್ಲಿ ನಮಾಝ್ ಮಾಡಿದ ಆರೋಪ; ಸ್ವಯಂ ಪ್ರೇರಿತ ಪ್ರಕರಣ ದಾಖಲು
 
ಮಂಗಳೂರು: ನಗರದ ಕಂಕನಾಡಿಯ ಮಸೀದಿಯೊಂದರ ಬಳಿಯ ರಸ್ತೆಯಲ್ಲಿ ಮೇ 24ರಂದು ನಮಾಝ್ ಮಾಡಿದ್ದಾರೆ ಎನ್ನಲಾದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಭಾರೀ ಚರ್ಚೆಯಾಗುತ್ತಿರುವ ಮಧ್ಯೆಯೇ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶುಕ್ರವಾರ ನಮಾಝ್ ಮಾಡಿದ್ದಾರೆ ಎನ್ನಲಾದ ಈ ವೀಡಿಯೋ ಸೋಮವಾರದಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು.

ಅಲ್ಲದೆ ಈ ಬಗ್ಗೆ ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗುತ್ತಿತ್ತು. ಅದರ ಮಧ್ಯೆ ಕದ್ರಿ ಪೊಲೀಸರು ಕಲಂ 341, 283, 143 ಜತೆಗೆ 149 ಐಪಿಸಿಯಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ವೀಡಿಯೋ ಪರಿಶೀಲಿಸಲಾಗಿದ್ದು, ಸಾರ್ವಜನಿಕರಿಗೆ ಓಡಾಡಲು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡೆತಡೆ ಯನ್ನುಂಟು ಮಾಡಿದ ವ್ಯಕ್ತಿಗಳ ವಿರುದ್ಧ ಸ್ವಯಂಪ್ರೇರಿತ (ಸುಮೊಟೊ) ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.


Spread the love

Leave a Reply