ಮಂಗಳೂರು ರೋಷನ್ ಸಲ್ದಾನ ವಂಚನೆ ಕೇಸ್: 2.85 ಕೋಟಿ ಆಸ್ತಿ ಇ.ಡಿ. ಮುಟ್ಟುಗೋಲು
ಮಂಗಳೂರು: ಬಹುಕೋಟಿ ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮಂಗಳೂರಿನ ರೋಷನ್ ಸಲ್ಡಾನ ಅವರ ಮನೆ ಮತ್ತು ಬ್ಯಾಂಕ್ ಖಾತೆ ಸೇರಿದಂತೆ 2.85 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನ ಜಾರಿ ನಿರ್ದೇಶನಾಲಯ (ಇ.ಡಿ.) ತಾತ್ಕಾಲಿಕ ಮುಟ್ಟುಗೋಲು ಹಾಕಿದೆ.
ಜಾರಿ ನಿರ್ದೇಶನಾಲಯದ ಮಂಗಳೂರು ಉಪವಲಯ ಕಚೇರಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಮುಟ್ಟುಗೋಲು ಹಾಕಿದ್ದಾರೆ.
ರೋಷನ್ ಸಲ್ಡಾನ, ಅವರ ಪತ್ನಿ ಢಫ್ನಿ ನೀತು ಹಾಗೂ ಇತರರ ವಿರುದ್ಧ ದಾಖಲಾದ ಎಫ್ಐಆರ್ ಆಧಾರದಲ್ಲಿ ಇ.ಡಿ. ತನಿಖೆಯನ್ನು ಪ್ರಾರಂಭಿಸಿದೆ. ರೋಷನ್ ಸಲ್ಡಾನ್ ಕೋಟಿಗಟ್ಟಲೆ ಸಾಲ ಕೊಡಿಸುವ ಆಮಿಷವೊಡ್ಡಿ 200 ಕೋಟಿಗೂ ಅಧಿಕ ವಂಚನೆ ಮಾಡಿದ್ದರು. ದೇಶದ ಐಷಾರಾಮಿ ವ್ಯಕ್ತಿಗಳು ಹಾಗೂ ಉದ್ಯಮಿಗಳನ್ನು ವಂಚಿಸಿರುವ ಆರೋಪಿ, ನೂರಾರು ಕೋಟಿ ಸಾಲ ತೆಗೆಸಿಕೊಡುವುದಾಗಿ ಹೇಳಿ 5 ರಿಂದ 10 ಕೋಟಿ ರೂಪಾಯಿ ಮುಂಗಡ ಹಣ ಪಡೆದು ಮೋಸ ಮಾಡುತ್ತಿದ್ದ.
