Spread the love
ಮಂಗಳೂರು | ರೌಡಿಶೀಟರ್ ಭರತ್ ಕುಮ್ಡೇಲು ನ್ಯಾಯಾಲಯಕ್ಕೆ ಶರಣು
ಮಂಗಳೂರು: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2017ರಲ್ಲಿ ನಡೆದ ಎಸ್‌ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಭರತ್ ಕುಮ್ಡೇಲು ಶುಕ್ರವಾರ ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಶರಣಾಗಿದ್ದಾನೆ. ನ್ಯಾಯಾಲಯವು ಆರೋಪಿಗೆ ಅ.25ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
2025ರ ಮೇ 27ರಂದು ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣದ ಬಳಿಕ ಭರತ್ ಕುಮ್ಡೇಲು ತಲೆಮರೆಸಿಕೊಂಡಿದ್ದ. ಅಲ್ಲದೆ ಅಶ್ರಫ್ ಕಲಾಯಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿಯೂ ಆರೋಪಿ ಭರತ್ ಕುಮ್ಡೇಲು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈತನ ವಿರುದ್ಧ ಬಂಟ್ವಾಳ ನಗರ ಠಾಣೆ, ಬಂಟ್ವಾಳ ಗ್ರಾಮಾಂತರ ಠಾಣೆ, ಉಪ್ಪಿನಂಗಡಿ ಠಾಣೆ, ಪುತ್ತೂರು ನಗರ ಠಾಣೆ ಸಹಿತ 15 ಪ್ರಕರಣ ದಾಖಲಾಗಿದೆ.
Spread the love