
Spread the love
ಮಂಗಳೂರು : ರೌಡಿ ಶೀಟರ್ ಕಕ್ಕೆ ರಾಹುಲ್ ಬರ್ಬರ ಕೊಲೆ
ಮಂಗಳೂರು : ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆಕೆರೆಯಲ್ಲಿ ಯುವಕನೊಬ್ಬನನ್ನು ತಂಡವೊಂದು ಕೊಲೆಗೈದ ಘಟನೆ ಗುರುವಾರ ನಡೆದಿದೆ.
ಕೊಲೆಯಾದ ಯುವಕನನ್ನು ರೌಡಿಶೀಟರ್ ರಾಹುಲ್ (26) ಎಂದು ಗುರುತಿಸಲಾಗಿದೆ.
ಮಾಹಿತಿಗಳ ಪ್ರಕಾರ ಎಮ್ಮೆಕೆರೆ ಬಳಿ ಕೋಳಿ ಅಂಕ ನಡೆಯುತ್ತಿದ್ದು ಅದನ್ನು ವೀಕ್ಷಿಸಲು ಆಗಮಿಸಿದ್ದ ರಾಹುಲ್ ನನ್ನು ನಾಲ್ವರು ದುಷ್ಕರ್ಮಿಗಳ ತಂಡ ಅಟ್ಟಿಸಿಕೊಂಡು ಬಂದು ಮೈದಾನದ ಬಳಿ ಬರ್ಬರವಾಗಿ ಕಡಿದು ಕೊಲೆ ಮಾಡಿದ್ದಾರೆ. ರಾಹುಲ್ ಹೊಯ್ಗೆಬಜಾರ್ ನಿವಾಸಿಯಾಗಿದ್ದು ಪಾಂಡೇಶ್ವರ ಠಾಣೆಯಲ್ಲಿ ರೌಡಿಶೀಟರ್ ಆಗಿ ಗುರುತಿಸಿಕೊಂಡಿದ್ದು, ಹಳೆ ದ್ವೇಷದ ಹಿನ್ನಲೆಯಲ್ಲಿ ಕೊಲೆ ಮಾಡಿರುಬಹುದು ಎಂದು ಶಂಕಿಸಲಾಗಿದೆ.
ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ
Spread the love