ಮಂಗಳೂರು: ವಿಚಾರಣಾಧೀನ ಕೈದಿ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿ

ಮಂಗಳೂರು: ವಿಚಾರಣಾಧೀನ ಕೈದಿ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿ

ಮಂಗಳೂರು: ನ್ಯಾಯಾಲಯಕ್ಕೆ ಹಾಜರುಪಡಿಸಿ ಉಪಕಾರಾಗೃಹಕ್ಕೆ ಕರೆ ತರುತ್ತಿದ್ದ ಸಂದರ್ಭ ವಿಚಾರಣಾಧೀನ ಕೈದಿಯೋರ್ವ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾದ ಘಟನೆ ಶುಕ್ರವಾರ ಸಂಜೆ ನಡೆದಿದೆ.

ಗೂಡಿನಬಳಿಯ ನಿವಾಸಿ ಮುಹಮ್ಮದ್ ರಫೀಕ್ (28) ಪರಾರಿಯಾದ ಆರೋಪಿ. ಈತನ ವಿರುದ್ಧ ಸರ ಕಳ್ಳತನ, ದರೋಡೆ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ವಿವರ: ಮುಹಮ್ಮದ್ ರಫೀಕ್‌ ವಿರುದ್ಧದ ಪ್ರಕರಣ ಬೆಳ್ತಂಗಡಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು, ಇಬ್ಬರು ಪೊಲೀಸರು ಆತನನ್ನು ಬಸ್ ಮೂಲಕ ಕರೆದೊಯ್ದು, ವಿಚಾರಣೆ ಮುಗಿಸಿ ಮಂಗಳೂರಿಗೆ ಬಂದಿದ್ದರು. ಪಿವಿಎಸ್ ವೃತ್ತದ ಬಳಿ ಬಸ್‌ನಿಂದ ಇಳಿದು ಉಪಕಾರಾಗೃಹದತ್ತ ನಡೆದುಕೊಂಡು ಬರುತ್ತಿದ್ದಾಗ ಕಾಂಪ್ಲೆಕ್ಸ್‌ವೊಂದರ ಎದುರು ಪೊಲೀಸರನ್ನು ತಳ್ಳಿ ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

  Subscribe  
Notify of