ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಸಾಗಾಟ ಪ್ರಕರಣ: ನವೆಂಬರ್ ತಿಂಗಳಿನಲ್ಲಿ ಒಟ್ಟು 4 ಕೋಟಿ ಮೌಲ್ಯದ ಚಿನ್ನ ವಶಕ್ಕೆ

Spread the love

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಸಾಗಾಟ ಪ್ರಕರಣ: ನವೆಂಬರ್ ತಿಂಗಳಿನಲ್ಲಿ ಒಟ್ಟು 4 ಕೋಟಿ ಮೌಲ್ಯದ ಚಿನ್ನ ವಶಕ್ಕೆ

ಮಂಗಳೂರು : ಮಂಗಳೂರು ಅಂತರ್‌ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನ.1ರಿಂದ 30ರವರೆಗೆ ವಿವಿಧ ಚಿನ್ನ ಅಕ್ರಮ ಸಾಗಾಣಿಕೆ ಪ್ರಕರಣದಲ್ಲಿ 7,692 ಗ್ರಾಂ ತೂಕದ 24 ಕ್ಯಾರೆಟ್ ಪರಿಶುದ್ಧತೆಯ 4,01,18,280 ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ದುಬೈನಿಂದ ಮಂಗಳೂರಿಗೆ ಆಗಮಿಸಿದ 10 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿದೆ.

Spread the love