ಮಂಗಳೂರು: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Spread the love

ಮಂಗಳೂರು: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಗಳೂರು:  ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಒಂದು ವರ್ಷದ ಅವಧಿಗೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಯ ವಿವರ ಇಂತಿದೆ:
ಜೆಪ್ಪುವಿಗೆ ಫಾರ್ಮಸಿಸ್ಟ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ, ಸುರತ್ಕಲ್ ಹಾಗೂ ಕಸಬಾ ಬೇಂಗ್ರೆಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಿರಿಯ ಪುರುಷ ಆರೋಗ್ಯ ಸಹಾಯಕ, ಆರ್.ಬಿ.ಎಸ್.ಕೆ ತಂಡದ ನೇತ್ರ ಸಹಾಯಕರ, ಉಳ್ಳಾಲದ ನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶುಶ್ರೂಷಕಿ, ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಎನ್.ಸಿ.ಡಿ ಘಟಕಕ್ಕೆ ಶುಶ್ರೂಷಕಿ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಹಾಗೂ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಐ.ಸಿ.ಯು, ಎಚ್.ಡಿ.ಯು ಘಟಕದ ಶುಶ್ರೂಷಕಿ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಹಾಗೂ ಸರ್ಕಾರಿ ಲೇಡಿಗೋಶನ್ ಆಸ್ಪತ್ರೆಗೆ ಶುಶ್ರೂಷಕಿ, ಎನ್.ಪಿ.ಪಿ.ಸಿ.ಡಿ ಘಟಕಕ್ಕೆ ಶ್ರವಣ ದೋಷವುಳ್ಳ ಮಕ್ಕಳಿಗೆ ಭೋಧಕ, ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ದಂತ ತಂತ್ರಜ್ಞ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು.

ಅರ್ಜಿ ನಮೂನೆ ಮತ್ತು ಹುದ್ದೆಯ ವಿವರ, ವಿದ್ಯಾರ್ಹತೆ, ವೇತನದ ಸಂಪೂರ್ಣ ಮಾಹಿತಿಗಳನ್ನು ಇಲಾಖಾ ವೆಬ್‍ಸೈಟ್ ನಲ್ಲಿ ಮತ್ತು ಮಂಗಳೂರಿನಲ್ಲಿರುವ ಜಿಲ್ಲಾ ಯೋಜನಾ ನಿರ್ವಹಣಾ ಘಟಕದ ಕಚೇರಿಯ ನೋಟಿಸ್ ಬೋರ್ಡ್‍ನಲ್ಲಿ ಪ್ರಕಟಿಸಲಾಗಿದೆ.

ಅರ್ಜಿ ಹಾಗೂ ದಾಖಲೆಗಳನ್ನು ಜುಲೈ 07ರ ಸಂಜೆ 3 ಗಂಟೆಯೊಳಗೆ ನೆಹರು ಮೈದಾನ ರಸ್ತೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯಲ್ಲಿ ಸಲ್ಲಿಸಬೇಕು. ಮಾಹಿತಿಗಾಗಿ ದೂ.ಸಂಖ್ಯೆ:0824-2424501 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೂಚನೆ:
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕೋವಿಡ್-19 ಅಡಿಯಲ್ಲಿ ಕರ್ತವ್ಯ ನಿರ್ವಹಿಸಿ 2022ರ ಮಾರ್ಚ್ 31 ರಂದು ಸೇವೆಯಿಂದ ಬಿಡುಗಡೆಗೊಂಡ ಅಭ್ಯರ್ಥಿಗಳಿಗೆ ನೇಮಕಾತಿಯಲ್ಲಿ ಪ್ರಥಮ ಆದ್ಯತೆ ನೀಡಲಾಗುವುದು.


Spread the love