ಮಂಗಳೂರು ವಿವಿ ಕಾಲೇಜಿನಲ್ಲಿ ಹಿಂದೂ ಮುಖಂಡನಿಗೆ ಆತಿಥ್ಯಕ್ಕೆ ಎನ್ ಎಸ್ ಯು ಐ ವಿರೋಧ, ಕಾರ್ಯಕ್ರಮ ಮುಂದೂಡಿಕೆ

Spread the love

ಮಂಗಳೂರು ವಿವಿ ಕಾಲೇಜಿನಲ್ಲಿ ಹಿಂದೂ ಮುಖಂಡನಿಗೆ ಆತಿಥ್ಯಕ್ಕೆ ಎನ್ ಎಸ್ ಯು ಐ ವಿರೋಧ, ಕಾರ್ಯಕ್ರಮ ಮುಂದೂಡಿಕೆ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಶುಕ್ರವಾರ ನಡೆಯಬೇಕಿದ್ದ ಪ್ರತಿಭಾ ದಿನಾಚರಣೆ ಮತ್ತು ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಹಿಂದೂ ಮುಖಂಡರೋರ್ವರಿಗೆ ಮುಖ್ಯ ಅತಿಥಿಯಾಗಿ ಕರೆದಿರುವುದಕ್ಕೆ ಅಪಸ್ವರ ಕೇಳಿಬಂದಿದೆ.

ಮಂಗಳೂರಿನ ಹಂಪನಕಟ್ಟೆ ಬಳಿಯ ವಿವಿ ಕಾಲೇಜುನಲ್ಲಿ ಜೂನ್ 23ರಂದು ಪ್ರತಿಭಾ ದಿನಾಚರಣೆ ಹಾಗೂ ಶನಿವಾರದ ಕಾಲೇಜು ವಾರ್ಷಿಕೋತ್ಸವ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಹಿಂದೂ ಜಾಗರಣ ವೇದಿಕೆ ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳ ಇವರಿಗೆ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದ್ದು, ಇದಕ್ಕೆ ಎನ್ಎಸ್ ಯುಐ ತೀವ್ರ ವಿರೋಧ ವ್ಯಕ್ತಪಡಿಸಿತ್ತು.

ಈ ಕುರಿತು ಮಂಗಳೂರು ನಗರ ಪೊಲೀಸ್ ಕಮಿಷನರ್ ಹಾಗೂ ಕಾಲೇಜು ಪ್ರಾಂಶುಪಾಲರಿಗೂ ಎನ್ಎಸ್ಯುಐ ದೂರು ನೀಡಿದ್ದು, ಶ್ರೀಕಾಂತ್ ಶೆಟ್ಟಿ ಅತಿಥಿಯಾದರೆ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುದಾಗಿ ಎಚ್ಚರಿಕೆ ನೀಡಿತ್ತು.

ವಿವಾದದ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ವಿವಿ ಕಾಲೇಜು ಕಾರ್ಯಕ್ರಮವನ್ನು ಮುಂದೂಡಿದ್ದು, ಶುಕ್ರವಾರ ಎಂದಿನಂತೆ ತರಗತಿ ನಡೆಯಲಿವೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.


Spread the love