ಮಂಗಳೂರು: ವಿಹಾರಕ್ಕೆ ಬಂದ ಯುವತಿ ಸಮುದ್ರಕ್ಕೆ ಬಿದ್ದು ಮೃತ್ಯು

Spread the love

ಮಂಗಳೂರು: ವಿಹಾರಕ್ಕೆ ಬಂದ ಯುವತಿ ಸಮುದ್ರಕ್ಕೆ ಬಿದ್ದು ಮೃತ್ಯು

ಮಂಗಳೂರು: ಸಮುದ್ರ ವಿಹಾರಕ್ಕೆ ಬಂದ ಯುವತಿಯೋರ್ವಳು ಆಯತಪ್ಪಿ ಸಮುದ್ರ ಪಾಲಾದ ಘಟನೆ ನಡೆದಿದೆ.

ಮಂಗಳೂರಲ್ಲಿ ಪೋಷಕರ ಜೊತೆ ವಾಸಿಸುತ್ತಿದ್ದ ಬಾಗಲಕೋಟೆ ಜಿಲ್ಲೆಯ, ಬಾದಾಮಿ ನಿವಾಸಿ ಕಾವೇರಿ(20)ಮೃತಪಟ್ಟ ಯುವತಿ.

ಬಿಕಾಂ ಕಲಿಯುತ್ತಿದ್ದ ಕಾವೇರಿ ನಿನ್ನೆ ಹುಟ್ಟುಹಬ್ಬ ಆಚರಿಸಿದ್ದು ಇಂದು ತನ್ನ ಬಾಲ್ಯ ಸ್ನೇಹಿತೆ ಕಾವೇರಿಯೊಂದಿಗೆ ಸೋಮೇಶ್ವರ ದೇವಸ್ಥಾನಕ್ಕೆ ತೆರಳಿ ಸಮುದ್ರ ತೀರಕ್ಕೆ ವಿಹಾರಕ್ಕೆ ಬಂದಿದ್ದಳು.

ಸ್ನೇಹಿತೆಯರಿಬ್ಬರು ಸಮುದ್ರ ತೀರದ ರುದ್ರ ಪಾದೆಯಲ್ಲಿ ವಿಹರಿಸುತ್ತಿದ್ದ ವೇಳೆ ಕಾವೇರಿ ಆಯ ತಪ್ಪಿ ಸಮುದ್ರಕ್ಕೆ ಬಿದ್ದಿದ್ದಾಳೆ.ಕೂಡಲೇ ಸ್ಥಳದಲ್ಲಿದ್ದವರು ರಕ್ಷಣೆಗೆ ಪ್ರಯತ್ನಿಸಿದ್ದರು.ಆದರೆ ಯುವತಿ ಕೊನೆಯುಸಿರೆಳೆದಿದ್ದಳು.

ಉಳ್ಳಾಲ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.


Spread the love