Home Mangalorean News Kannada News ಮಂಗಳೂರು: ವ್ಯಕ್ತಿ ಕಾಣೆಯಾದ ಬಗ್ಗೆ ಪ್ರಕರಣ ದಾಖಲು

ಮಂಗಳೂರು: ವ್ಯಕ್ತಿ ಕಾಣೆಯಾದ ಬಗ್ಗೆ ಪ್ರಕರಣ ದಾಖಲು

Spread the love

ಮಂಗಳೂರು: ವ್ಯಕ್ತಿ ಕಾಣೆಯಾದ ಬಗ್ಗೆ ಪ್ರಕರಣ ದಾಖಲು

ಮಂಗಳೂರು: ಪ್ರದೀಪ್ ಕುಮಾರ್ (48) ಎಂಬವರು ಏಪ್ರಿಲ್ 8ರಂದು ಮನೆಯಿಂದ ತೆರಳಿದ ಬಳಿಕ ಈವರೆಗೆ ಮನೆಗೆ ಮರಳದೇ ಕಾಣೆಯಾಗಿರುವ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕಾಣೆಯಾದವರ ಚಹರೆ: ಎತ್ತರ ಸುಮಾರು 5.8 ಅಡಿ, ಗೋಧಿ ಮೈಬಣ್ಣ, ಕಪ್ಪು ಕೂದಲು (ತಲೆಯ ನೆತ್ತಿಯ ಮೇಲ್ಭಾಗದಲ್ಲಿ ಕೂದಲು ಇಲ್ಲ), ದಪ್ಪ ಮೈಕಟ್ಟು ಹೊಂದಿದ್ದಾರೆ. ಕನ್ನಡ, ಹಿಂದಿ, ಇಂಗ್ಲಿಷ್ ಹಾಗೂ ತುಳು ಭಾಷೆಗಳನ್ನು ಮಾತನಾಡುತ್ತಾರೆ ಎಂದು ತಿಳಿದುಬಂದಿದೆ.

ಕಾಣೆಯಾದವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.


Spread the love

Exit mobile version