ಮಂಗಳೂರು: ಸರ್ಫಿಂಗ್ ಚಾಂಪಿಯನ್‍ಶಿಪ್ ಮುಂದೂಡಿಕೆ

Spread the love

ಮಂಗಳೂರು: ಪ್ರವಾಸೋದ್ಯಮ ಇಲಾಖೆ ಮತ್ತು ಸರ್ಫಿಂಗ್ ಫೆಡರೇಶನ್ ಸಹಯೋಗದಲ್ಲಿ ಮಂಗಳೂರಿನ ಬೀಚ್‍ನಲ್ಲಿ ಇದೇ ಮೇ ತಿಂಗಳ 29,30,31 ರಂದು ನಡೆಯಬೇಕಾಗಿದ್ದ ರಾಷ್ಟ್ರೀಯ ಸರ್ಫಿಂಗ್ ಚಾಂಪಿಯನ್‍ಶಿಪ್ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

ಜಿಲ್ಲೆಯಾದ್ಯಂತ ಸ್ಥಳೀಯ ಪಂಚಾಯತ್‍ಗಳ ಚುನಾವಣೆ ನಡೆಯಲಿದ್ದು, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮತ್ತು ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳನ್ನು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸುವುದು ಕಷ್ಟ ಸಾಧ್ಯವಾದ್ದರಿಂದ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಈ ಕಾರ್ಯಕ್ರಮವನ್ನು ಅಕ್ಟೋಬರ್ ತಿಂಗಳ ಕೊನೆಯ ವಾರದಲ್ಲಿ 22 ರಿಂದ 25 ರತನಕ ವಿಜೃಂಭಣೆಯಿಂದ ಜರುಗಿಸುವುದಾಗಿ ತೀರ್ಮಾನಿಸಿದ್ದು, ಸಾರ್ವಜನಿಕರ ಸಹಕಾರ ಕೋರಲಾಗಿದೆಯೆಂದು ದ.ಕ.ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


Spread the love