ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ಬೃಹತ್ ಪ್ರಮಾಣದಲ್ಲಿ ಸಾಗಾಟ ಮಾಡುತ್ತಿದ್ದ ಗಾಂಜಾ ಪತ್ತೆ ಇಬ್ಬರು ಆರೋಪಿಗಳ ಸೆರೆ

Spread the love

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ಬೃಹತ್ ಪ್ರಮಾಣದಲ್ಲಿ ಸಾಗಾಟ ಮಾಡುತ್ತಿದ್ದ ಗಾಂಜಾ ಪತ್ತೆ ಇಬ್ಬರು ಆರೋಪಿಗಳ ಸೆರೆ

ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಂಗಳೂರು ನಗರಕ್ಕೆ, ಬೆಂಗಳೂರಿಗೆ ಹಾಗೂ ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ಮಹೇಂದ್ರ XUV 500 ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 132 ಕೆ ಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

ದಿನಾಂಕ: 17-11-2022 ರಂದು ಮಂಗಳೂರು ನಗರಕ್ಕೆ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಹೇಂದ್ರ XUV 500 ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್, ಪಿಎಸ್ಐ ರಾಜೇಂದ್ರ ಬಿ ನೇತೃತ್ವದ ಸಿಸಿಬಿ ಪೊಲೀಸರು ಮುಡಿಪು ಕುರ್ನಾಡು ಗ್ರಾಮದ ಕಾಯರ್ ಗೋಳಿ ಎಂಬಲ್ಲಿ ಪತ್ತೆ ಹಚ್ಚಿ ಕಾರಿನಲ್ಲಿ ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ 1. ರಮೀಝ್ ರಾಝ್, ಪ್ರಾಯ(30), ವಾಸ: ಡೋರ್ ನಂಬ್ರ: 2-392, ತೌಡುಗೋಳಿ ಕ್ರಾಸ್, ನರಿಂಗಾನ ಗ್ರಾಮ, ಬಂಟ್ವಾಳ ತಾಲೂಕು.
2. ಅಬ್ದುಲ್ ಖಾದರ್ ಹ್ಯಾರಿಸ್, ಪ್ರಾಯ(31), ವಾಸ: ಜೀಲಾನಿ ಮಂಝಿಲ್, ಮದಂಗಲ್ ಕಟ್ಟ, ಮೀಯಪದವು, ಮಂಜೇಶ್ವರ, ಕಾಸರಗೋಡು ಜಿಲ್ಲೆ, ಕೇರಳ ರಾಜ್ಯ.
ಎಂಬವರನ್ನು ವಶಕ್ಕೆ ಪಡೆದುಕೊಂಡು ಆರೋಪಿಗಳ ವಶದಲ್ಲಿದ್ದ ಬಿಳಿ ಬಣ್ಣದ ಮಹೇಂದ್ರ XUV 500 ಕಾರು ನಂಬ್ರ: ಕೆಎಲ್-14-ಪಿ-7775 ನೇದನ್ನು ಸ್ವಾಧೀನಪಡಿಸಿಕೊಂಡು ಅದರಲ್ಲಿ ಸಾಗಾಟ ಮಾಡುತ್ತಿದ್ದ 132 ಕೆಜಿ ಗಾಂಜಾವನ್ನು, 2 ಮೊಬೈಲ್ ಫೋನ್ ಗಳನ್ನು, 3 ತಲವಾರುಗಳನ್ನು, ನಗದು ರೂ. 2180/- ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಗಾಂಜಾ, ಮಹೇಂದ್ರ XUV 500 ಕಾರು, ಮೊಬೈಲ್ ಫೋನ್ ಗಳ ಒಟ್ಟು ಮೌಲ್ಯ ರೂ. 39,15,000/- ಆಗಿರುತ್ತದೆ. ಆರೋಪಿಗಳು ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ಗಾಂಜಾವನ್ನು ಕಾರಿನಲ್ಲಿರಿಸಿ ಸಾಗಾಟ ಮಾಡುತ್ತಿದ್ದರು. ಈ ಅಕ್ರಮ ಗಾಂಜಾ ಸಾಗಾಟದ ಸಮಯದಲ್ಲಿ ಪೊಲೀಸರು ಅಥವಾ ಸಾರ್ವಜನಿಕರು ನಿಲ್ಲಿಸಿದ್ದಲ್ಲಿ, ಅವರಿಗೆ ತೊಂದರೆ ನೀಡುವ ಉದ್ದೇಶದಿಂದ ತಲವಾರುಗಳನ್ನು ಕಾರಿನಲ್ಲಿ ಇರಿಸಿದ್ದರು. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಆರೋಪಿಗಳ ಪೈಕಿ ರಮೀಝ್ ರಾಝ್ ಎಂಬಾತನ ವಿರುದ್ಧ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ದ್ರವ್ಯ ಸೇವನೆಗೆ ಸಂಬಂಧಪಟ್ಟಂತೆ ಒಂದು ಪ್ರಕರಣ, ಗಾಂಜಾ ಮಾರಾಟ ಮಾಡಿದ ಪ್ರಕರಣ, ಹಲ್ಲೆ ಪ್ರಕರಣ, ಹೀಗೆ ಒಟ್ಟು 3 ಪ್ರಕರಣ ದಾಖಲಾಗಿರುತ್ತದೆ. ಅಲ್ಲದೇ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟಕ್ಕೆ ಸಂಬಂಧಪಟ್ಟಂತೆ ಒಂದು ಪ್ರಕರಣ ಹಾಗೂ ಕೊಲೆ ಯತ್ನ ಪ್ರಕರಣ ಮತ್ತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟದ ಒಂದು ಪ್ರಕರಣ ಹೀಗೆ ಒಟ್ಟು 6 ಪ್ರಕರಣಗಳು ದಾಖಲಾಗಿರುತ್ತದೆ.
ಇನ್ನೋರ್ವ ಆರೋಪಿ ಅಬ್ದುಲ್ ಖಾದರ್ ಹ್ಯಾರಿಸ್ ಎಂಬಾತನ ವಿರುದ್ದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 2 ಕೊಲೆ ಯತ್ನ ಪ್ರಕರಣ ಹಾಗೂ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ 2 ಹಲ್ಲೆ ಪ್ರಕರಣಗಳು ದಾಖಲಾಗಿರುತ್ತದೆ.

ಆರೋಪಿಗಳಿಬ್ಬರೂ ಕರ್ನಾಟಕ- ಕೇರಳ ರಾಜ್ಯದ ಗಡಿಭಾಗದವರಾಗಿದ್ದು, ಕರ್ನಾಟಕ, ಕೇರಳ, ಬೆಂಗಳೂರಿನ ಸಾರ್ವಜನಿಕರಿಗೆ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡಿ ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಬಾಡಿಗೆಗೆ ಕಾರನ್ನು ಪಡೆದುಕೊಂಡು ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಗಾಂಜಾವನ್ನು ಖರೀದಿಸಿಕೊಂಡು ಬೆಂಗಳೂರು, ಮಂಗಳೂರು, ಕೇರಳಕ್ಕೆ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದರು. ಈ ಬೃಹತ್ ಗಾಂಜಾ ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗುವುದು.

ಈ ಬೃಹತ್ ಗಾಂಜಾ ಮಾರಾಟ/ಸಾಗಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಮಹೇಶ್ ಪ್ರಸಾದ್, ಪಿಎಸ್ಐ ರಾಜೇಂದ್ರ ಬಿ, ಎಎಸ್ಐ ಯವರಾದ ಶಶಿಧರ ಶೆಟ್ಟಿ, ಮೋಹನ್ ಕೆ ವಿ, ಹರೀಶ ಪಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.


Spread the love

Leave a Reply

Please enter your comment!
Please enter your name here