ಮಂಗಳೂರು: ಸೆ. 10 ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ

Spread the love

ಮಂಗಳೂರು: ಸೆ. 10 ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ

ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸಂಯುಕ್ತಾಶ್ರಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಇದೇ ಸೆ.10ರ ಶನಿವಾರ ಮಂಗಳೂರು ನಗರದ ಡಾ.ಟಿ.ಎಂ.ಎ. ಪೈ ಇಂಟರ್ ನ್ಯಾಷನಲ್ ಕನ್‍ವೆನ್‍ಶನ್ ಸೆಂಟರ್‍ನಲ್ಲಿ ಹಮ್ಮಿಕೊಳ್ಳಲಾಗಿದೆ.

ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕರಾದ ಡಿ. ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸುವರು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಗೌರವ ಉಪಸ್ಥಿತಿ ವಹಿಸುವರು.

ಮುಖ್ಯ ಅಥಿತಿಗಳಾಗಿ ಸಂಸದರಾದ ನಳಿನ್ ಕುಮಾರ್ ಕಟೀಲ್, ರಾಜ್ಯ ಸಭೆಯ ಸಂಸದರಾದ ಡಾ.ಡಿ. ವೀರೇಂದ್ರ ಹೆಗ್ಗಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ಯು.ಟಿ. ಖಾದರ್, ಡಾ.ವೈ. ಭರತ್ ಶೆಟ್ಟಿ, ಹರೀಶ್ ಪೂಂಜ, ರಾಜೇಶ್ ನಾಯ್ಕ ಯು., ಸಂಜೀವ ಮಠಂದೂರು, ಉಮಾನಾಥ್ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ. ಫಾರೂಕ್, ಹರೀಶ್ ಕುಮಾರ್, ಆಯನೂರು ಮಂಜುನಾಥ್, ಎಸ್.ಎಲ್. ಭೋಜೆಗೌಡ, ಪ್ರತಾಪ್ ಸಿಂಹ ನಾಯಕ್, ಮಂಜುನಾಥ್ ಭಂಡಾರಿ, ಮೀನುಗಾರಿಕೆ ಅಭಿವೃಧ್ಧಿ ನಿಗಮದ ಅಧ್ಯಕ್ಷರಾದ ಎ.ವಿ. ತೀರ್ಥರಾಮ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಜಗದೀಶ್ ಪೈ, ಅರೆಭಾμÉ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಬೆಂಗಳೂರಿನ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಕಾರ್ಯದರ್ಶಿ ಡಾ. ಎನ್. ಮಂಜುಳ ಉಪಸ್ಥಿತಿ ವಹಿಸುವರು.

ನಗರದ ಕುದ್ರೋಳಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ ಬಿ. ಶ್ರೀ ನಾರಾಯಣ ಗುರುಗಳ ಜಯಂತಿ ಸಂದೇಶ ನೀಡುವರು. ಅಂದು ಸಂಜೆ 4 ಗಂಟೆಗೆ ನಗರದ ನಾರಾಯಣ ಗುರು ವೃತ್ತದಿಂದ ಡಾ.ಟಿ.ಎಂ.ಎ.ಪೈ ಇಂಟರ್ ನ್ಯಾಷನಲ್ ಕನ್‍ವೆನ್‍ಶನ್ ಸೆಂಟರ್ ವರೆಗೆ ನಾರಾಯಣ ಗುರುಗಳ ಸ್ತಬ್ಧಚಿತ್ರದೊಂದಿಗೆ ಚೆಂಡೆ, ಗೊಂಬೆ, ಸ್ಯಾಕ್ಸೋಫೋನ್, ಡೊಳ್ಳು ಕುಣಿತ, ಹುಲಿವೇಷ ಮುಂತಾದ ಜಾನಪದ ಕಲಾತಂಡದೊಂದಿಗೆ ಮೆರವಣಿಗೆ ನಡೆಯಲಿದೆ. ವಿದ್ವಾನ್ ಪ್ರಮೋದ್ ಉಳ್ಳಾಲ್ ನೃತ್ಯ ಸಂಯೋಜನೆ ಮತ್ತು ಡಾ.ಅರುಣ್ ಉಳ್ಳಾಲ್ ಸಾಹಿತ್ಯದೊಂದಿಗೆ ಬ್ರಹ್ಮಶ್ರೀ ನಾರಾಯಣಗುರು ಭರತನಾಟ್ಯ ನೃತ್ಯರೂಪಕ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಖ್ಯಾತ ಯುವ ಚಿತ್ರಕಲಾವಿದರಿಂದ ಶ್ರೀ. ನಾರಾಯಣ ಗುರುಗಳ ಸಂದೇಶ ಸಾರುವ ಚಿತ್ರಕಲಾ ಪ್ರದರ್ಶನವನ್ನು ಸಹ ಏರ್ಪಡಿಸಲಾಗಿದೆ.


Spread the love

Leave a Reply

Please enter your comment!
Please enter your name here