ಮಂಗಳೂರು: ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆ – ಅರ್ಜಿ ಆಹ್ವಾನ

Spread the love

ಮಂಗಳೂರು: ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆ – ಅರ್ಜಿ ಆಹ್ವಾನ

ಮಂಗಳೂರು: 2023-24ನೇ ಸಾಲಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿ ಇಲಾಖೆಯ ರಾಜ್ಯವಲಯ ಯೋಜನೆಗಳಡಿ “ಹೈಟೆಕ್ ಹಾರ್ವೆಸ್ಟರ್ ಹಬ್” ಎಂಬ ಹೊಸ ಯೋಜನೆಯನ್ನು ಪ್ರಾರಂಭಿಸಲಾಗಿದೆ.

ಸದರಿ ಯೋಜನೆಯಡಿ ಜಿಲ್ಲೆಗೆ ಒಬ್ಬರು ಮಾಡಬಹುದಾದ ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪಿಸಲು ಗುರಿ ನೀಡಲಾಗಿದೆ. ಆಸಕ್ತ ಫಲಾನುಭವಿಗಳು ಜಿಲ್ಲೆಗೆ ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ರೂ.40 ಲಕ್ಷದ ಒಂದು ಕಂಬೈನ್ಡ್ ಹಾರ್ವೆಸ್ಟರ್ ಹಬ್ ಸ್ಥಾಪಿಸಲು ಅವಕಾಶವಿರುತ್ತದೆ. ಸದರಿ ಹಬ್ ಸ್ಥಾಪನೆಗೆ ಸಾಮಾನ್ಯ ವರ್ಗದ ರೈತರಿಗೆ ಗರಿಷ್ಟ ಶೇ.50ರಂತೆ ಸಹಾಯಧನವನ್ನು `Credit Linked Back Ended Subsidy ಮುಖಾಂತರ ನೀಡಲಾಗುವುದು.

ಈ ಯೋಜನೆಯಡಿ ಕಂಬೈನ್ಡ್ ಹಾರ್ವೆಸ್ಟರ್ ಹಬ್ ಸ್ಥಾಪಿಸಲು ಆಸಕ್ತಿಯುಳ್ಳ ಸಾಮಾನ್ಯ ವರ್ಗದ ರೈತರು ತಮ್ಮ ಈIಆ ಯೊಂದಿಗೆ ಪಹಣಿ, ಗುರುತಿನ ಪತ್ರ, ಬ್ಯಾಂಕ್ ಖಾತೆ ಸಂಖ್ಯೆ, ರೂ.20/-ಗಳ ಛಾಪಾ ಕಾಗದದ ಮೇಲೆ ಹಬ್ ಅನ್ನು ಪರಬಾರೆ ಮಾಡುವುದಿಲ್ಲವೆಂದು ಮುಚ್ಚಳಿಕೆ ಪತ್ರ, ಹಾಗೂ ತಾತ್ವಿಕ ಸಾಲ ಮಂಜೂರಾತಿ ಪತ್ರ (In Principle loan Sanction Letter) ಗಳೊಂದಿಗೆ ಜನವರಿ 29ರೊಳಗೆ ಅರ್ಜಿಗಳನ್ನು ಸಂಬಂಧಪಟ್ಟ ತಾಲೂಕು ಸಹಾಯಕ ಕೃಷಿ ನಿರ್ದೇಶಕರ PಚೆÉೀರಿಗೆ ಸಲ್ಲಿಸಬೇಕು.

ಜಿಲ್ಲೆಯಲ್ಲಿ ಕೇವಲ ಒಂದು ಹಾರ್ವೆಸ್ಟರ್ ಹಬ್ ಮಾತ್ರ ಗುರಿ ಇರುವುದರಿಂದ ಮೊದಲು ಅರ್ಜಿ ಸಲ್ಲಿಸಿದವರಿಗೆ ಆದ್ಯತೆ ಹಾಗೂ ಒಂದಕ್ಕಿಂತ ಹೆಚ್ಚು ಅರ್ಜಿಗಳು ಬಂದಲ್ಲ್ಲಿ ಲಾಟರಿ ಮುಖಾಂತರ ಆಯ್ಕೆ ಮಾಡಲಾಗುವುದು. ಸ್ವೀಕೃತಗೊಂಡ ಅರ್ಜಿಗಳನ್ನು ಜಿಲ್ಲಾ ಮಟ್ಟದ ಉಪಕರಣ ಸಮಿತಿ ಸಭೆಯಲ್ಲಿ ಮಂಡಿಸಿ ಅಂತಿಮವಾಗಿ ತೀರ್ಮಾನಿಸಲಾಗುವುದು.

ಮಾನದಂಡಗಳು:
• “ಕಂಬೈನ್ಡ್ ಹಾರ್ವೆಸ್ಟರ್ ಹಬ್ ನಲ್ಲಿ“ ಕಂಬೈನ್ಡ್ ಹಾರ್ವೆಸ್ಟರ್ ನೊಂದಿಗೆ ಃಚಿಟeಡಿ ದಾಸ್ತಾನಿಕರಿಸುವುದು ಕಡ್ಡಾಯವಾಗಿರುತ್ತದೆ ಹಾಗೂ ಇತರೆ ಉಪಕರಣಗಳಿಗೆ ಸಹಾಯಧನ ಪಡೆಯಲು ಅವಕಾಶವಿದ್ದು, ದಾಸ್ತಾನೀಕರಿಸುವುದು ಐಚ್ಛಿಕವಾಗಿರುತ್ತದೆ.

• ಆಯ್ಕೆಯಾದ ಫಲಾನುಭವಿಗಳು ಕೃಷಿ ಮೂಲಭೂತ ಸೌಕರ್ಯ ನಿಧಿ ಯೋಜನೆಯಡಿ ಸಾಲದ ನೆರವನ್ನು ಸಹ ಪಡೆಯಲು ಅವಕಾಶವಿರುತ್ತದೆ.

• ಹೈಟೆಕ್ ಹಾರ್ವೆಸ್ಟರ್ ಹಬ್ ಗಳಲ್ಲಿ ದಾಸ್ತಾನಿಕರಿಸುವ ಯಂತ್ರೋಪಕರಣ ಗಳನ್ನು ಬಾಡಿಗೆ ಆಧಾರದಲ್ಲಿ ಅಕ್ಕಪಕ್ಕದ ಜಿಲ್ಲೆಯ ರೈತರಿಗೆ ಒದಗಿಸಲು ಅವಕಾಶವಿರುತ್ತದೆ.

• ಹೈಟೆಕ್ ಹಾರ್ವೆಸ್ಟರ್ ಹಬ್‍ಗಳಿಗೆ ಸಹಾಯಧನದಡಿ ಒದಗಿಸುವ ಹೈಟೆಕ್ ಯಂತ್ರೋಪಕರಣಗಳ ಕಾರ್ಯಾಚರಣೆ/ ಸಂಚರಣೆಯನ್ನು ಗಮನಿಸಲು (To track the live Movement & Location of Machines) ಹಾಗೂ ಯಂತ್ರೋಪಕರಣವಾರು/ಹಬ್ ವಾರು ವರದಿಯನ್ನು ಪಡೆಯಲು ಅನುಕೂಲವಾಗುವಂತೆ ರೂ.1 ಲಕ್ಷಕ್ಕಿಂತ ಹೆಚ್ಚಿನ ಮೌಲ್ಯದ ಸ್ವಯಂಚಾಲಿತ ಕೃಷಿ ಯಂತ್ರೋಪಕರಣಗಳಿಗೆ AI-Powered Telematics Kit ಅನ್ನು ಅಳವಡಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ.

ಹೆಚ್ಚಿನ ಮಾಹಿತಿಗೆ ಸಂಬಂಧಪಟ್ಟ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love