ಮಂಗಳೂರು: 23 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯ ಬಂಧನ

Spread the love

ಮಂಗಳೂರು: 23 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯ ಬಂಧನ
 

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 23 ಪ್ರಕರಣಗಳಲ್ಲಿ ಜಾಮೀನು ರಹಿತ ವಾರಂಟು ಇರುವ ಆರೋಪಿ ಅಜರುದ್ದೀನ್ (29) ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಅಜರುದ್ದೀನ್ ಅಲಿಯಾಸ್ ಅಜರ್ (ನಾಥು) ಕೃಷ್ಣಾಪುರ, ಕಾಟಿಪಳ್ಳ ಗ್ರಾಮದ ಮಂಗಳೂರು ತಾಲೂಕು, ದ.ಕ ಜಿಲ್ಲೆಯವನಾಗಿದ್ದು, ಈತನ ಮೇಲೆ 23 ಪ್ರಕರಣಗಳಲ್ಲಿ ಜಾಮೀನು ರಹಿತ ವಾರಂಟು ಇದ್ದು, ಮಂಗಳೂರು ಪೊಲೀಸು ಆಯುಕ್ತರ ಆದೇಶದ ಮೇರೆಗೆ ಬಂಧಿಸಲಾಗಿದೆ.

ಮಂಗಳೂರು ಉತ್ತರ ಉಪವಿಭಾಗದ ಸಹಾಯಕ ಆಯುಕ್ತರಾದ ಮನೋಜ್‌ ಕುಮಾರ್‌ರವರ ನಿರ್ದೇಶನದಂತೆ ದಿನಾಂಕ 22/03/2023 ರಂದು ಸುರತ್ಕಲ್ ಪೊಲೀಸ್ ಠಾಣೆಯ ನಿರೀಕ್ಷಕರಾದ ಮಹೇಶ್‌ ಪ್ರಸಾದ್‌ ನೇತೃತ್ವದಲ್ಲಿ ಪೊಲೀಸ್ ಉಪನಿರೀಕ್ಷಕರಾದ ಮಲ್ಲಿಕಾರ್ಜುನ್‌ ಸಿಬ್ಬಂದಿಗಳಾದ ಅಜಿತ್ ಮ್ಯಾಥ್, ಮಣಿಕಂಠ, ಕಾರ್ತಿಕ್ ಅವರ ತಂಡ ಆರೋಪಿಯನ್ನು ದಸ್ತಗಿರಿ ಮಾಡಿ ಮಾನ್ಯ ಮಂಗಳೂರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.


Spread the love