ಮಂಗಳೂರು: 8 ವರ್ಷ ಪ್ರಾಯದ ಬಾಲಕಿ ಕೊಲೆ – ಹಲವರು ಪೊಲೀಸ್‌ ವಶಕ್ಕೆ

Spread the love

ಮಂಗಳೂರು: 8 ವರ್ಷ ಪ್ರಾಯದ ಬಾಲಕಿ ಕೊಲೆ – ಹಲವರು ಪೊಲೀಸ್‌ ವಶಕ್ಕೆ

ಮಂಗಳೂರು: ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಉಳಾಯಿಬೆಟ್ಟು, ಸಮೀಪದ ಪರಾರಿ ಎಂಬಲ್ಲಿನ ರಾಜ್‌ಟೈಲ್ಸ್ ಎಂಬ ಹೆಸರಿನ ಹಂಚಿನ ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕ ಕುಟುಂಬಕ್ಕೆ ಸೇರಿದ 8 ವರ್ಷ ಪ್ರಾಯದ ಬಾಲಕಿಯನ್ನು ಕೊಲೆಗೈದ ಘಟನೆ ರವಿವಾರ ಸಂಜೆ ಬೆಳಕಿಗೆ ಬಂದಿದೆ

ಗುರುಪುರ ಸೇತುವೆಯ ಹತ್ತಿರದ ಪರಾರಿ ಕ್ರಾಸ್‌ನಲ್ಲಿ ‘ರಾಜ್‌ ಟೈಲ್’ ಫ್ಯಾಕ್ಟರಿ ಇದ್ದು, ಇಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂ ಕುಟುಂಬದ ಮಹಿಳೆಯ 8 ವರ್ಷದ ಹೆಣ್ಣು ಮಗು ರವಿವಾರ ಸಂಜೆ 4 ಗಂಟೆಯಿಂದ ದಿಢೀರ್ ನಾಪತ್ತೆಯಾಗಿತ್ತು. ಹುಡುಕಾಡಿದಾಗ ಸಂಜೆಯ ಸುಮಾರಿಗೆ ಕಾರ್ಖಾನೆಯ ಸಮೀಪದ ಮೋರಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಆಯುಕ್ತ ಶಶಿಕುಮಾರ್ “ರಾಜ್‌ಟೈಲ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವ ಕಾರ್ಮಿಕ ಕುಟುಂಬಕ್ಕೆ ಸೇರಿದ ಬಾಲಕಿ ರವಿವಾರ ಸಂಜೆ ನಾಪತ್ತೆಯಾಗಿದ್ದು, ಹುಡುಕಾಟದ ಬಳಿಕ ಸಮೀಪದ ಡ್ರೈನೇಜ್ ಬಳಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಕಾರ್ಖಾನೆಯೊಳಗಿನ ಕಾರ್ಮಿಕರೇ ಈ ಕೃತ್ಯ ಎಸಗಿರುವ ಬಗ್ಗೆ ಶಂಕೆ ಇದ ವಿಚಾರಣೆಗಾಗಿ ಹಲವರನ್ನು ವಶಕ್ಕೆ ಪಡೆಯಲಾಗಿದೆ.


Spread the love