ಮಂಗಳೂರು: 9 ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Spread the love

ಮಂಗಳೂರು: 9 ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
 

ಮಂಗಳೂರು: ಮಂಗಳೂರು ನಗರ ಮತ್ತು ದ.ಕ.ಜಿಲ್ಲಾ ಪೊಲೀಸ್ ಇಲಾಖಾ ವ್ಯಾಪ್ತಿಯ ನಾಲ್ಕು ಪೊಲೀಸ್ ಠಾಣೆಗಳಲ್ಲಿ 9 ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊಣಾಜೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಬಂಟ್ವಾಳ ಗ್ರಾಮದ ಕಸಬಾ ಗ್ರಾಮದ ಮುಗ್ಗಾಲ್ ಗುಡ್ಡ ಮನೆಯ ಸಂತು ಯಾನೆ ಸಂತೋಷ್ (36) ಬಂಧಿತ ಆರೋಪಿ. ಈತನ ವಿರುದ್ಧ ಕೊಣಾಜೆ ಠಾಣೆಯಲ್ಲಿ 1, ಬಂಟ್ವಾಳ ನಗರದಲ್ಲಿ 3, ಬಂಟ್ವಾಳ ಗ್ರಾಮಾಂತರದಲ್ಲಿ 4, ಉಪ್ಪಿನಂಗಡಿ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿತ್ತು.

ಕೊಣಾಜೆ ಠಾಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕಳೆದ ವರ್ಷ ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಪೊಲೀಸ್ ಆಯುಕ್ತರ ಸೂಚನೆಯ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ.


Spread the love