Home Mangalorean News Kannada News ಮಂಗಿಲಪದವಿನಲ್ಲಿ ಅಕ್ರಮ ಮದ್ಯ ಮಾರಾಟ: ವ್ಯಕ್ತಿ ಬಂಧನ; 4.5 ಲೀಟರ್ ಮದ್ಯ, ನಗದು ವಶ

ಮಂಗಿಲಪದವಿನಲ್ಲಿ ಅಕ್ರಮ ಮದ್ಯ ಮಾರಾಟ: ವ್ಯಕ್ತಿ ಬಂಧನ; 4.5 ಲೀಟರ್ ಮದ್ಯ, ನಗದು ವಶ

Spread the love

ಮಂಗಿಲಪದವಿನಲ್ಲಿ ಅಕ್ರಮ ಮದ್ಯ ಮಾರಾಟ: ವ್ಯಕ್ತಿ ಬಂಧನ; 4.5 ಲೀಟರ್ ಮದ್ಯ, ನಗದು ವಶ

ವಿಟ್ಲ: ಅಕ್ರಮವಾಗಿ ಮದ್ಯ ಸಂಗ್ರಹಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪದಡಿ ವ್ಯಕ್ತಿಯೊಬ್ಬನನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ಆತನಿಂದ ವಿವಿಧ ಮಾದರಿಯ ಮದ್ಯ ಹಾಗೂ ಮಾರಾಟದಿಂದ ಸಂಗ್ರಹಿಸಿದ್ದ ನಗದನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ವಿಟ್ಲ ಕಸಬಾ ನಿವಾಸಿ ಲಕ್ಷ್ಮಣಗೌಡ (54) ಎಂದು ಗುರುತಿಸಲಾಗಿದೆ.

ಜೂನ್ 26ರಂದು ರಾತ್ರಿ ವೇಳೆ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಪ್ರಕಾಶ ದೇವಾಡಿಗ ಅವರಿಗೆ ಮಂಗಿಲಪದವು ಬಸ್ ತಂಗುದಾಣದ ಬಳಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತಿತ್ತು. ಅದರಂತೆ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದ ವೇಳೆ, ಬಸ್ ತಂಗುದಾಣದ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ಪರಿಶೀಲಿಸಲಾಯಿತು.

ಆರೋಪಿಯ ಬಳಿಯಿದ್ದ ಚೀಲವನ್ನು ತಪಾಸಣೆ ನಡೆಸಿದಾಗ ವಿವಿಧ ಮಾದರಿಯ ಒಟ್ಟು 4.5 ಲೀಟರ್ ಮದ್ಯ ಹಾಗೂ ಮದ್ಯ ಮಾರಾಟದಿಂದ ಸಂಗ್ರಹಿಸಲಾಗಿದ್ದ ರೂ.300 ನಗದು ಪತ್ತೆಯಾಯಿತು.

ವಿಚಾರಣೆ ವೇಳೆ ಯಾವುದೇ ಮಾನ್ಯ ಪರವಾನಿಗೆ ಇಲ್ಲದೆ ಗಿರಾಕಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಮದ್ಯವನ್ನು ಸಂಗ್ರಹಿಸಿಕೊಂಡಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಪೊಲೀಸರು ಮದ್ಯವನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 141/2026ರಡಿ ಕರ್ನಾಟಕ ಅಬಕಾರಿ ಕಾಯ್ದೆ-1965ರ ಕಲಂ 15, 32 ಮತ್ತು 34 ಅನ್ವಯ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.


Spread the love

Exit mobile version