ಮಂಡ್ಯ ಶಾಸಕರಿಂದ ಕೆರೆ ಅಂಗಳ ಸ್ಥಳ ಪರಿಶೀಲನೆ

Spread the love

ಮಂಡ್ಯ ಶಾಸಕರಿಂದ ಕೆರೆ ಅಂಗಳ ಸ್ಥಳ ಪರಿಶೀಲನೆ

ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಪಿ ರವಿಕುಮಾರ್ ಗಣಿಗ ಅವರು ಮಂಗಳವಾರ ಕೆರೆ ಅಂಗಳ ನಿವಾಸಿಗಳ ಕುಂದು ಕೊರತೆ, ಮೂಲಭೂತ ಸೌಕರ್ಯ ಹಾಗೂ ಸ್ಥಳೀಯ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿದರು.

ಮುಂಗಾರು ಮಳೆ ಪ್ರಾರಂಭವಾಗುತ್ತಿರುವ ಹಿನ್ನಲೆ ಮುನ್ನೆಚ್ಚರಿಕೆ ಕ್ರಮವಾಗಿ ಕೈಗೆತ್ತಿ ಕೊಳ್ಳಬೇಕಾದ ಕಾರ್ಯಗಳ ಕುರಿತು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.

ನಂತರ ಮಾತನಾಡಿದ ಅವರು ಕರ್ನಾಟಕ ಗೃಹ ಮಂಡಳಿ ವತಿಯಿಂದ ನಿರ್ಮಿಸಿರುವ ಬಡವಾಣೆಯ ಕಾಲುವೆಗಳಿಗೆ ಮಳೆಗಾಲದಲ್ಲಿ ನೀರು ನುಗ್ಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಇದನ್ನು ಕೂಡಲೆ ಬಗೆಹರಿಸಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದರು.

ಮಳೆಗಾಲದಲ್ಲಿ ಇಲ್ಲಿನ ನಿವಾಸಿಗಳಿಗೆ ತೊಂದರೆಯಾಗುತ್ತಿದ್ದು ಸದ್ಯದ ಪರಿಸ್ಥಿತಿಯಲ್ಲಿ ಸಮಸ್ಯೆ ಬರದಂತೆ ನೋಡಿಕೊಂಡು ಮುಂದಿನ ದಿನಗಳಲ್ಲಿ ಶಾಶ್ವತ ಪರಿಹಾರ ನೀಡುವುದಾಗಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಮಂಡ್ಯದ ಪ್ರಭಾರ ಉಪವಿಭಾಗಾಧಿಕಾರಿ ಕೃಷ್ಣಕುಮಾರ್, ತಹಶಿಲ್ದಾರ್ ವಿಜಯ್ ಕುಮಾರ್, ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಭಿಯಂತರ ದರ್ಶನ್, ನಗರಸಭೆ ಅಭಿಯಂತರ ರವಿಕುಮಾರ್, ನಗರ ಸಭೆ ಆರೋಗ್ಯ ಪರೀವಿಕ್ಷಕ ಚೆಲುವರಾಜು ಸೇರಿದಂತೆ ಇನ್ನಿತರರು ಹಾಜರಿದ್ದರು.


Spread the love