ಮಕ್ಕಳ ಜೊತೆ ಸಂವಾದ ನಡೆಸುವ ಮೂಲಕ ಕಾರ್ಯಾರಂಭ ಮಾಡಿದ ನೂತನ ಡಿ.ಸಿ ಕೂರ್ಮ ರಾವ್

Spread the love

ಮಕ್ಕಳ ಜೊತೆ ಸಂವಾದ ನಡೆಸುವ ಮೂಲಕ ಕಾರ್ಯಾರಂಭ ಮಾಡಿದ ನೂತನ ಡಿ.ಸಿ ಕೂರ್ಮ ರಾವ್

ಉಡುಪಿ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಎಂ ಕೂರ್ಮ ರಾವ್‌ ಅವರು ಮೊದಲ ದಿನವೇ ಮಕ್ಕಳೊಂದಿಗೆ ಸಂವಾದ ನಡೆಸಿದರು.

ನಗರದ ಸರಕಾರಿ ಬಾಲಕಿಯರ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಭೇಟಿ ನೀಡಿದ ಅವರು ವಿದ್ಯಾರ್ಥಿನಿಯರೊಂದಿಗೆ ಬೆರೆತು ಕೆಲ ಕಾಲ ಸಂವಾದ ನಡೆಸಿದರು.

ಹಲವು ಸಮಯದ ಬಳಿಕ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ಅರಿತುಕೊಂಡರು. ಮೊದಲ ದಿನ‌ ಶಾಲೆಗೆ ತೆರಳಿ ವಿದ್ಯಾರ್ಥಿಗಳ ಕ್ಷೇಮ ವಿಚಾರಿಸಿದ ಜಿಲ್ಲಾಧಿಕಾರಿ ಕೂರ್ಮ ರಾವ್‌ ಮಕ್ಕಳ ಶಾಲೆಯ ಅನುಭವ, ಪಾಠಗಳ ಬಗ್ಗೆ ಸಂವಾದ ನಡೆಸಿದರು.

ಕೊರೋನಾ ನಿರ್ಮೂಲನೆಯೊಂದಿಗೆ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕೂಡ ಕಾಳಜಿ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು ಸಾಮಾಜಿಕ ಅಂತರ, ಮಾಸ್ಕ್‌ ಧಾರಣೆಯೊಂದಿಗೆ ಕಲಿಕೆಯ ಬಗ್ಗೆ ಗಮನವ ಹರಿಸುವಂತೆ ಕಿವಿ ಮಾತು ಹೇಳಿದರು.


Spread the love