ಮಟಪಾಡಿ: ಬೋನಿಗೆ ಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Spread the love

ಮಟಪಾಡಿ: ಬೋನಿಗೆ ಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಬ್ರಹ್ಮಾವರ: ಇಲ್ಲಿನ ಮಟಪಾಡಿ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದ್ದ ಚಿರತೆಯೊಂದನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

ಬ್ರಹ್ಮಾವರ ತಾಲೂಕಿನ ಮಟಪಾಡಿ ಭಾಗದಲ್ಲಿ ಹಲವಾರು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದು ಸಾಕು ಪ್ರಾಣಿಗಳನ್ನು ಕೊಲ್ಲುತ್ತಿದ್ದ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಗ್ರಾಮಸ್ಥರ ಮನವಿ ಮೇರೆಗೆ ಅರಣ್ಯ ಇಲಾಖೆಯ ಸಿಬಂದಿ ಬೋನು ಇರಿಸಿದ್ದು ಬುಧವಾರ ಬೆಳಿಗ್ಗೆ ಬೋನಿನಲ್ಲಿ ಸುಮಾರು ಆರು ವರ್ಷ ಪ್ರಾಯದ ಹೆಣ್ಣು ಚಿರತೆಯೊಂದು ಸಿಕ್ಕಿಬಿದ್ದಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ.

ಬೋನಿಗೆ ಬಿದ್ದ ಚಿರತೆ ಕೂಗುತ್ತಿದ್ದನ್ನು ಗಮನಿಸಿ ಗ್ರಾಮಸ್ಥರು ಅರಣ್ಯ ಇಲಾಖೆಯ ಸಿಬಂದಿಗಳಿಗೆ ಗ್ರಾಮಸ್ಥರು ಮಾಹಿತಿ ನೀಡಿದ್ದು ವಲಯ ಅರಣ್ಯಾಧಿಕಾರಿಗಳು ಮತ್ತು ಸಿಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಚಿರತೆ ಇರುವ ಬೋನನ್ನು ವನ್ಯಧಾಮಕ್ಕೆ ಕೊಂಡೊಯ್ದು ಚಿರತೆಯನ್ನು ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟಿದ್ದಾರೆ.

ಗ್ರಾಮದಲ್ಲಿನ ಅಂಗನವಾಡಿ, ಶಾಲೆಯ ಪರಿಸರದಲ್ಲಿ ಚಿರತೆ ತಿರುಗಾಡುತ್ತಿರುವುದನ್ನು ಗಮನಿಸಿ ಆತಂಕಿತರಾಗಿದ್ದ ಗ್ರಾಮಸ್ಥರು ಚಿರತೆಯನ್ನು ಬಂಧಿಸುವಂತೆ ಮಾಡಿದ್ದ ಮನವಿಗೆ ಪ್ರಾಮಾಣಿಕ ಸ್ಪಂದನೆ ಮಾಡಿ ಬೋನನ್ನು ಇರಿಸಿ ಚಿರತೆಯನ್ನು ಬಂಧಿಸಿದ ಅರಣ‍್ಯಾಧಿಕಾರಿಗಳ ಕಾರ್ಯವನ್ನು ಗ್ರಾಮಸ್ಥರು ಅಭಿನಂದಿಸಿದ್ದಾರೆ.

https://www.facebook.com/MangaloreanNews/videos/844733323550449

https://www.facebook.com/MangaloreanNews/videos/844733323550449


Spread the love