ಮಡಿಕೇರಿಯಲ್ಲಿ ಯುದ್ಧ ಸ್ಮಾರಕಕ್ಕೆ ಗೌರವ ನಮನ

Spread the love

ಮಡಿಕೇರಿಯಲ್ಲಿ ಯುದ್ಧ ಸ್ಮಾರಕಕ್ಕೆ ಗೌರವ ನಮನ

ಮಡಿಕೇರಿ: ಸ್ವಾತಂತ್ರ್ಯದ ವರ್ಷಾಚರಣೆಯ ಅಮೃತ ಮಹೋತ್ಸವ ಪ್ರಯುಕ್ತ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಮ್ಯೂಸಿಯಂನಲ್ಲಿರುವ ಯುದ್ಧ ಸ್ಮಾರಕಕ್ಕೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಏರ್ ಮಾರ್ಷಲ್(ನಿವೃತ್ತ) ನಂದ ಕಾರ್ಯಪ್ಪ, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ ಇತರರು ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಚಿಣ್ಣಪ್ಪ, ತಹಶೀಲ್ದಾರ್ ಮಹೇಶ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಬಾನಾ ಎಂ.ಶೇಕ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಶಶಿಧರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೆ.ಟಿ.ದರ್ಶನ್, ಪೌರಾಯುಕ್ತ ಎಸ್.ವಿ.ರಾಮದಾಸ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ದಯಾನಂದ, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಪ್ರಮೋದ್, ಮಣಜೂರು ಮಂಜುನಾಥ್ ಅವರು ಯುದ್ದ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡಿದರು. ಬಳಿಕ ಸನ್ನಿಸೈಡ್ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.


Spread the love