ಮಡಿಕೇರಿಯಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಬಿಜೆಪಿ ಕಾರ್ಯಕರ್ತರು

Spread the love

ಮಡಿಕೇರಿಯಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಬಿಜೆಪಿ ಕಾರ್ಯಕರ್ತರು
 

ಮಡಿಕೇರಿ: ಕೊಡಗು ಜಿಲ್ಲೆಯ ಮಳೆ ಹಾನಿ ಪ್ರದೇಶಗಳನ್ನು ವೀಕ್ಷಿಸಿ ಮಡಿಕೇರಿಗೆ ಬಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಕಪ್ಪುಬಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು ಕೋಳಿಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದರು.


ಇದನ್ನು ಖಂಡಿಸಿದ ಕಾಂಗ್ರೆಸ್ ಕಾರ್ಯಕರ್ತರು ವೃತ್ತದ ಮತ್ತೊಂದು ಪಾರ್ಶ್ವದಲ್ಲಿ ಪ್ರತಿಭಟನೆಗೆ ಕುಳಿತರು.‌ ಸುಮಾರು ಅರ್ಧ ಗಂಟೆಗಳ ಕಾಲ ಉಭಯ ಕಾರ್ಯಕರ್ತರು ಒಂದೇ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಬಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಯ್ಯಪ್ಪ ಉಭಯ ಪಕ್ಷದ ಕಾರ್ಯಕರ್ತರ ಮನವೊಲಿಸಿ ವಾಪಸ್ ಕಳುಹಿಸಿದರು.


Spread the love