ಮಡಿಕೇರಿ ದಸರಾ ಕರಗ ಉತ್ಸವಕ್ಕೆ ಚಾಲನೆ

Spread the love

ಮಡಿಕೇರಿ ದಸರಾ ಕರಗ ಉತ್ಸವಕ್ಕೆ ಚಾಲನೆ

ಮಡಿಕೇರಿ: ಮಡಿಕೇರಿ ದಸರಾ ಕರಗ ಮಹೋತ್ಸವಕ್ಕೆ ಸೋಮವಾರ ಶ್ರದ್ಧಾಭಕ್ತಿಯಿಂದ ಚಾಲನೆ ದೊರೆಯಿತು. ಕರಗ ಉತ್ಸವ ಆರಂಭದೊಂದಿಗೆ ನವರಾತ್ರಿ ದಸರಾ ಉತ್ಸವಕ್ಕೆ ಚಾಲನೆ ದೊರೆಯಿತು.

ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಉಪಾಧ್ಯಕ್ಷರಾದ ಸವಿತಾ ರಾಕೇಶ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ದಸರಾ ಸಮಿತಿ ಕಾರ್ಯಧ್ಯಕ್ಷರಾದ ರಮೇಶ್, ಪೌರಾಯುಕ್ತರಾದ ವಿಜಯ, ನಗರಸಭಾ ಸದಸ್ಯರು, ನಗರ ದಸರಾ ವಿವಿಧ ಸಮಿತಿ ಅಧ್ಯಕ್ಷರು, ಸದಸ್ಯರು, ಭಕ್ತಾಧಿಗಳು ಇತರರು ಪಾಲ್ಗೊಂಡಿದ್ದರು.

ನಗರದ ನಾಲ್ಕು ಶಕ್ತಿ ದೇವತೆಗಳಾದ ಕುಂದೂರು ಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯ, ದಂಡಿನ ಮಾರಿಯಮ್ಮ ದೇವಾಲಯ, ಕೋಟೆ ಮಾರಿಯಮ್ಮ ದೇವಾಲಯ ಮತ್ತು ಕಂಚಿ ಕಾಮಾಕ್ಷಿ ದೇವಾಲಯಗಳ ಕರಗವನ್ನು ನಗರದ ಪಂಪಿನಕೆರೆಯಲ್ಲಿ ಸಾಂಪ್ರದಾಯಿಕವಾಗಿ, ಭಕ್ತಿಯಿಂದ ಪೂಜೆ ಸಲ್ಲಿಸಿ ಕರಗ ಉತ್ಸವಕ್ಕೆ ಚಾಲನೆ ನೀಡಲಾಯಿತು.

ಕುಂದೂರು ಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯದ ಕರಗವನ್ನು ಚಾಮಿ, ದಂಡಿನ ಮಾರಿಯಮ್ಮ ದೇವಾಲಯದ ಕರಗವನ್ನು ಉಮೇಶ್, ಕೋಟೆ ಮಾರಿಯಮ್ಮ ದೇವಾಲಯ ಕರಗವನ್ನು ಉಮೇಶ್ ಸುಬ್ರಮಣಿ ಮತ್ತು ಕಂಚಿ ಕಾಮಾಕ್ಷಿ ದೇವಾಲಯದ ಕರಗವನ್ನು ನವೀನ್ ಅವರು ಹೊತ್ತಿದ್ದರು. ನಂತರ ಕರಗ ಪ್ರದಕ್ಷಿಣೆ ಜರುಗಿತು.

ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ ಮತ್ತು ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಮಾತನಾಡಿ ನಾಡಿನ ಎಲ್ಲರಿಗೂ ಸಮೃದ್ಧಿ ಉಂಟುಮಾಡಲಿ, ಎಲ್ಲರಿಗೂ ಒಳಿತಾಗಲಿ ಎಂದು ಆಶಿಸಿದರು.


Spread the love