ಮಣಿಪಾಲದಲ್ಲಿ ವಿದ್ಯಾರ್ಥಿಗಳಿಬ್ಬರನ್ನು ಚಾಕು ತೋರಿಸಿ ಬೆದರಿಸಿ ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳ ಬಂಧನ

Spread the love

ಮಣಿಪಾಲದಲ್ಲಿ ವಿದ್ಯಾರ್ಥಿಗಳಿಬ್ಬರನ್ನು ಚಾಕು ತೋರಿಸಿ ಬೆದರಿಸಿ ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳ ಬಂಧನ

ಮಣಿಪಾಲ: ರಸ್ತೆಯಲ್ಲಿ ವಿದ್ಯಾರ್ಥಿಗಳಿಬ್ಬರನ್ನು ಕಾರ್ನಲ್ಲಿ ಅಡ್ಡಗಟ್ಟಿ ಚಾಕು ತೋರಿಸಿ ಬೆದರಿಸಿ ಮೊಬೈಲ್, ವಾಚ್ ನಗದು ಹಣವನ್ನು ಸುಲಿಗೆ ಮಾಡಿದ ಆರೋಪಿಗಳನ್ನು ಬಂಧಿಸುವಲ್ಲಿ ಮಣಿಪಾಲ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಬಂಧಿತ ಆರೋಪಿಗಳನ್ನು ಶಿವಮೊಗ್ಗದ ಆಶಿಫ್ (24) ಮತ್ತು ಮತ್ತು ದಸ್ತಗೀರ್ ಬೇಗ್ (24) ಎಂದು ಗುರುತಿಸಲಾಗಿದೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್ ಆರೋಪಿಗಳು ಇತ್ತೀಚೆಗೆ ಮಣಿಪಾಲದ ಕೆ.ಎಫ್ಸಿ ಹೋಟೆಲ್ ಬಳಿ ರಾತ್ರಿ ವೇಳೆಯಲ್ಲಿ ನಡೆದುಕೊಂಡು ಬರುತ್ತಿದ್ದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯನ್ನು ಕಾರ್ನಲ್ಲಿ ಅಡ್ಡಗಟ್ಟಿ ಚಾಕು ತೋರಿಸಿ ಬೆದರಿಸಿ ಮೊಬೈಲ್, ವಾಚ್ ನಗದು ಹಣವನ್ನು ಸುಲಿಗೆ ಮಾಡಿದ್ದು, ಈ ಘಟನೆ ಮಣಿಪಾಲದ ವಿದ್ಯಾರ್ಥಿ ಮತ್ತು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಆತಂಕಕ್ಕೆ ಕಾರಣವಾಗಿತ್ತು.

ಜನವರಿ 31 ರಂದು ರಾತ್ರಿ ಸುಮಾರು 12:15 ಗಂಟೆ ಸಮಯದಲ್ಲಿ ಮಣಿಪಾಲದ ಕೆ.ಎಫ್.ಸಿ ಬಿಲ್ಡಿಂಗ್ ಬಳಿ ಕುಳಿತು ಮಾತನಾಡುತ್ತಿದ್ದ ಒಬ್ಬ ವಿದ್ಯಾರ್ಥಿ ಮತ್ತು ಒಬ್ಬ ವಿದ್ಯಾರ್ಥಿನಿಯನ್ನು ನೋಡಿದ ಮೂರು ಆರೋಪಿತರು ಬೇರೆ ಯಾರೂ ಇಲ್ಲದೇ ಇರುವುದನ್ನು ಗಮನಿಸಿ ದೂರದಲ್ಲಿ ಕಾರ್ ನಿಲ್ಲಿಸಿ ಸಿಗರೇಟ್ ಕೇಳುವ ನೆಪದಲ್ಲಿ ವಿದ್ಯಾರ್ಥಿನಿಯ ಬಳಿ ಬಂದು ಅವಳ ಕುತ್ತಿಗೆಗೆ ಚಾಕು ಹಿಡಿದು ಬೆದರಿಸಿ ಅವರ ಬಳಿಯಿದ್ದ 2 ಮೊಬೈಲ್ ಗಳು 250 ರೂಪಾಯಿ ನಗದು ಹಣ ಹಾಗೂ ಇಯರ್ ಫೋನ್ಗಳನ್ನು ಸುಲಿಗೆ ಮಾಡಿ ಪರಾರಿಯಾಗಿದ್ದರು.

ಮೇಲ್ಕಂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ಇಲಾಖೆ ಆರೋಪಿಗಳ ಪತ್ತೆಗೆ ಅಡಿಷನಲ್ ಎಸ್ಪಿ ಶ್ರೀ ಕುಮಾರಚಂದ್ರ ಮತ್ತು ಡಿವೈಎಸ್ಪಿ ಸುಧಾಕರ ನಾಯಕ ರವರ ಮೇಲುಸ್ತುವಾರಿಯಲ್ಲಿ ಆರೋಪಿತರನ್ನುಪತ್ತೆ ಮಾಡಲು ಮಣಿಪಾಲ ಪೊಲೀಸ್ ನಿರೀಕ್ಷಕರಾದ ಶ್ರೀ ಮಂಜುನಾಥ ಎಂ ರವರ ನಾಯಕತ್ವದಲ್ಲಿ ತಂಡವನ್ನು ರಚನೆ ಮಾಡಿಲಾಗಿತ್ತು.

ತನಿಖಾ ತಂಡದ ಸದಸ್ಯರಾದ ಪಿಎಸ್ಐ ರಾಜ್ಶೇಖರ ವಂದಲಿ, ಪ್ರೋ.ಪಿ.ಎಸ್ಐ ನಿರಂಜನ್ ಗೌಡ ಮತ್ತು ದೇವರಾಜ ಬಿರದಾರ, ಎಎಸ್ಐ ಶೈಲೇಶ್ಕುಮಾರ್ , ಹೆಚ್ ಸಿ ಮಹೇಶ್ , ಅಬ್ದುಲ್ ರಾಜಾಕ್, ಥಾಮ್ಸನ್, ಪ್ರಸನ್ನ , ವಿಶ್ವಜಿತ್ , ಪಿಸಿ ಮೊಹಮ್ಮದ್ ರಫೀಕ್, ಆದರ್ಶ ನಾಯ್ಕ ರವರು ಹಾಗೂ ಸಿಡಿಆರ್ ಘಟಕದ ದಿನೇಶ್ ರವರು ಮುಂಬೈ, ಥಾಣೆ, ಬೆಂಗಳೂರು, ಶಿವಮೊಗ್ಗಗಳಲ್ಲಿ ತಿರುಗಾಡಿ ಆರೋಪಿಗಳನ್ನು ಭಾನುವಾರ ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು ಪತ್ತೆ ಕಾರ್ಯ ಮುಂದುವರಿದಿದೆ. ಆರೋಪಿ ಆಸೀಫ್ ವಿರುದ್ದ ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಬಂಧಿತರಿಂದ ಕೃತ್ಯಕ್ಕೆ ಬಳಸಿದ ಹೋಂಡಾ ಸಿವಿಕ್ MH-04-CT-1339 ನೇ ಕಾರ್, 2 Android Mobile Phone ಮತ್ತು ಚಾಕುವನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.


Spread the love