ಮಣಿಪಾಲ ಆರೋಗ್ಯಕಾರ್ಡ್ 2024 ರ ನೋಂದಾವಣೆ ಪ್ರಕ್ರಿಯೆಗೆ ಚಾಲನೆ

Spread the love

ಮಣಿಪಾಲ ಆರೋಗ್ಯಕಾರ್ಡ್ 2024 ರ ನೋಂದಾವಣೆ ಪ್ರಕ್ರಿಯೆಗೆ ಚಾಲನೆ

ಮಂಗಳೂರು, ಆಗಸ್ಟ್ 20, 2024: 2024 ನೇ ಸಾಲಿನ ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆಯ ನೋಂದಣಿಯುಪ್ರಾರAಭವಾಗಿದ್ದು ಜನರು ಇದರ ಸದುಪಯೋಗವನ್ನುಪಡೆದುಕೊಳ್ಳಬೇಕೆಂದು ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಡೀನ್ಡಾ. ಬಿ. ಉನ್ನಿಕೃಷ್ಣನ್ ವಿನಂತಿಸಿದರು. ಅವರು 2024ರ ಮಣಿಪಾಲ್ ಆರೋಗ್ಯ ಕಾರ್ಡ್ ಯೋಜನೆಯ ಕುರಿತು ಮಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಮಾಧ್ಯಮ ಪ್ರತಿನಿಧಿಯವರನ್ನು ಉದ್ದೇಶಿಸಿ ಮಾತನಾಡಿದರು.

“ಮಣಿಪಾಲ್ ಆರೋಗ್ಯ ಕಾರ್ಡ್ ಯೋಜನೆಯು ಸಮುದಾಯಕ್ಕೆ ಕೈಗೆಟುಕುವ ವೆಚ್ಚದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಪ್ರಾರಂಭಿಸಲಾಗಿದೆ.

ಸAಸ್ಥೆಯ ಸಂಸ್ಥಾಪಕ, ದಿವಂಗತ ಡಾ. ಟಿಎಂಎ ಪೈಯವರ ಕನಸಿನಂತೆ ಆರೋಗ್ಯ ಸೇವೆಯನ್ನು ಎಲ್ಲರಿಗೂ ಕೈಗೆಟಕುವ ದರದಲ್ಲಿ ಲಭ್ಯವಾಗುವಂತೆ ಮಾಡಲು ಈ ಯೋಜನೆಯನ್ನು 2000ನೇ ಇಸವಿಯಲ್ಲಿ ಸಾಮಾಜಿಕ ಜವಾಬ್ದಾರಿಯ ಭಾಗವಾಗಿ ಪ್ರಾರಂಭಿಸಲಾಗಿದೆ” ಎಂದು ತಿಳಿಸಿದರು.

ಕೆ.ಎಂ.ಸಿ. ಆಸ್ಪತ್ರೆ, ಅತ್ತಾವರದ ವೈದ್ಯಕೀಯ ಅಧೀಕ್ಷಕರಾದ ಡಾ. ಚಕ್ರಪಾಣಿ ಎಂ ಯೋಜನೆಯ ಪ್ರಯೋಜನಗಳನ್ನು ವಿವರಿಸಿ ಮಾತನಾಡುತ್ತಾ “ಈ ಯೋಜನೆಯು ಒಂದು ವರ್ಷ ಮತ್ತು ಎರಡು ವರ್ಷದ ಅವಧಿಯನ್ನು ಹೊಂದಿದ್ದು ಈ ಆರೋಗ್ಯ ಕಾರ್ಡ್ ಹೊಂದಿರುವವರು ಮಣಿಪಾಲ್ ಸಮೂಹ ಆಸ್ಪತ್ರೆಗಳಾದ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ, ಕೆ.ಎಂ.ಸಿ. ಆಸ್ಪತ್ರೆ ಡಾ. ಬಿ. ಆರ್. ಅಂಬೇಡ್ಕರ್ ವೃತ್ತ್ತ, ದುರ್ಗಾ ಸಂಜೀವನಿ ಮಣಿಪಾಲ್ ಆಸ್ಪತ್ರೆ ಕಟೀಲು, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಡಾ. ಟಿಎಂಎ ಪೈ ಆಸ್ಪತ್ರೆ ಉಡುಪಿ, ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆ ಕಾರ್ಕಳ, ಹಾಗೂ ಮಣಿಪಾಲ್ ಆಸ್ಪತ್ರೆ ಗೋವಾಗಳಲ್ಲಿ ರಿಯಾಯಿತಿ ಸೌಲಭ್ಯಗಳನ್ನು ಪಡೆಯಬಹುದು.

ಈ ಕಾರ್ಡ್ನ ಸೌಲಭ್ಯಗಳು ದಂತ ಚಿಕಿತ್ಸೆಗೂ ಅನ್ವಯವಾಗಲಿದ್ದು ಕಾರ್ಡುದಾರರು ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸಾಯನ್ಸಸ್ ಮಂಗಳೂರು ಮತ್ತು ಮಣಿಪಾಲದಲ್ಲಿ ರಿಯಾಯಿತಿ ಸೌಲಭ್ಯಗಳನ್ನು ಪಡೆಯಬಹುದು” ಎಂದು ತಿಳಿಸಿದರು.

ದುರ್ಗಾ ಸಂಜೀವನಿ ಮಣಿಪಾಲ್ ಆಸ್ಪತ್ರೆ, ಕಟೀಲು ಇಲ್ಲಿನ ಮುಖ್ಯ ಆಡಳಿತಾಧಿಕಾರಿಯಾಗಿರುವ ಡಾ.ಶಿವಾನಂದ ಪ್ರಭು ಮಣಿಪಾಲ ಆರೋಗ್ಯ ಕಾರ್ಡ್ನ ಪ್ರಯೋಜನಗಳನ್ನು ವಿವರಿಸುತ್ತಾ, “ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರು ಎಲ್ಲಾ ತಜ್ಞ ಅಥವಾ ಸೂಪರ್ ಸ್ಪೆಷಲಿಸ್ಟ್ ವೈದ್ಯರ ಹೊರರೋಗಿ ಸಮಾಲೋಚನೆ ಮೇಲೆ 50% ದ ವರೆಗೆ ರಿಯಾಯಿತಿ, ಪ್ರಯೋಗಾಲಯ ಪರೀಕ್ಷೆಗಳ ಮೇಲೆ 20% ರಿಯಾಯಿತಿ, ರೇಡಿಯಾಲಜಿ ಪರೀಕ್ಷೆಗಳಾದ ಸಿಟಿ. ಎಮ್.ಆರ್.ಐ, ಅಲ್ಟಾç ಸೌಂಡ್, ಎಕ್ಸ್ರೇ ಹಾಗೂ ಇನ್ನಿತರ ಪರೀಕ್ಷೆಗಳ ಮೇಲೆ 20% ರಿಯಾಯಿತಿ, ಆಸ್ಪತ್ರೆಯ ಔಷಧಾಲಯದಿಂದ ಖರೀದಿಸಿದ ಔಷಧಿಗಳ ಮೇಲೆ 10%ರ ವರೆಗೆ ರಿಯಾಯಿತಿಯು ಇರುತ್ತದೆ. ಒಳರೋಗಿಯಾಗಿ ದಾಖಲಾದಲ್ಲಿ (ಕನ್ಸುö್ಯಮೇಬಲ್ಸ್ ಮತ್ತು ಪ್ಯಾಕೇಜ್ಗಳನ್ನು ಹೊರತುಪಡಿಸಿ)  ಬಿಲ್ಲಿನಲ್ಲಿ 25% ದವರೆಗೆ ರಿಯಾಯಿತಿ ಸಿಗುತ್ತದೆ. ಈ ಯೋಜನೆಗೆ ಸೇರಲು ವಯಸ್ಸಿನ ಮಿತಿಯಿಲ್ಲದ ಕಾರಣ, ಈ ಯೋಜನೆಯು ಹಿರಿಯ ನಾಗರಿಕರಿಗೆ ವರದಾನವಾಗಲಿದ್ದು ಕೈಗೆಟಕುವಿಕೆಯೊಂದಿಗೆ ಗುಣಮಟ್ಟದ ಆರೋಗ್ಯವನ್ನು ಪಡೆಯಲು ಸಹಾಯ ಮಾಡಿದೆ.” ಎಂದು ತಿಳಿಸಿದರು.

ಕೆ.ಎಂ.ಸಿ. ಆಸ್ಪತ್ರೆ ಮಂಗಳೂರಿನ ರೀಜನಲ್ ಚೀಫ್ ಆಪರೇಟಿಂಗ್ ಆಫೀಸರ್ ಶ್ರೀ. ಸಘೀರ್ ಸಿದ್ದಿಕಿಯವರು ಕಾರ್ಡಿನ ಸದಸ್ಯತ್ವ ಶುಲ್ಕದ ಬಗ್ಗೆ ಮಾತನಾಡುತ್ತಾ, “ಒಂದು ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ರೂ. 350/ – ಕೌಟಂಬಿಕ ಯೋಜನೆ ಅಂದರೆ ಕಾರ್ಡುದಾರ, ಅವರ ಸಂಗಾತಿ ಮತ್ತು 25 ವರ್ಷದ ಒಳಗಿನ ಮದುವೆಯಾಗದ ಮಕ್ಕಳಿಗೆ ರೂ. 700/- ಮತ್ತು ಕುಟುಂಬ ಪ್ಲಸ್ ಯೋಜನೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ರೂ. 900/-. ಎರಡು ವರ್ಷದ ಯೋಜನೆಯಲ್ಲಿ ಒಬ್ಬರಿಗೆ ರೂ. 600/-, ಕುಟುಂಬಕ್ಕೆ ರೂ. 950/- ಮತ್ತು ಕೌಟಂಬಿಕ ಪ್ರಸ್ ಯೋಜನೆಗೆ ರೂ. 1100/- ಆಗಿರುತ್ತದೆ” ಎಂದು ವಿವರಿಸಿದರು.

ಮಾರ್ಕೆಟಿಂಗ್ ವಿಭಾಗದ ಮುಖ್ಯ ವ್ಯವಸ್ಥಾಪಕರಾದ ಶ್ರೀ ಸಚಿನ್ ಕಾರಂತ್ ಮಾತನಾಡಿ “ಕಳೆದ 23 ವರ್ಷಗಳಲ್ಲಿ, ಸಾಮಾಜಿಕ ಕಾಳಜಿಯೊಂದಿಗೆ ನಾವು ಲಕ್ಷಾಂತರ ಜನರಿಗೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಗಳನ್ನು ರಿಯಾಯಿತಿ ದರದಲ್ಲಿ ಒದಗಿಸುತ್ತಿದ್ದೇವೆ ಮತ್ತು ವರ್ಷದಿಂದ ವರ್ಷಕ್ಕೆ ಸದಸ್ಯರ ನೋಂದಣಿ ಹೆಚ್ಚಾಗುತ್ತಿರುವುದು ಮಣಿಪಾಲ ಆರೋಗ್ಯಕಾರ್ಡ್ನ ಜನಪ್ರಿಯತೆಯನ್ನು ತೋರಿಸುತ್ತದೆ”ೆ ಎಂದು ಹೇಳಿದರು. “ಆಸ್ಪತ್ರೆಗಳ ರಿಯಾಯಿತಿ ಮಾದರಿಗಳನ್ನು ತಿಳಿಯಲು ಮತ್ತು ಹೆಚ್ಚಿನ ವಿವರಗಳನ್ನು ತಿತಿತಿ.mಚಿಟಿiಠಿಚಿಟheಚಿಟಣhಛಿಚಿಡಿಜ.ಛಿom ಗೆ ಲಾಗ್ ಇನ್ ಆಗುವುದರ ಮೂಲಕ ತಿಳಿದುಕೊಳ್ಳಬಹುದು. ಸಾರ್ವಜನಿಕರು ಮಣಿಪಾಲ್ ಹೆಲ್ತ್ ಕಾರ್ಡ್ ನೊಂದಣಿಯನ್ನು ಕೆಎಂಸಿ ಆಸ್ಪತ್ರೆ ಅತ್ತಾವರ, ಕೆಎಂಸಿ ಆಸ್ಪತ್ರೆ ಡಾ. ಬಿ.ಆರ್. ಅಂಬೇಡ್ಕರ್ ವೃತ್ತ ಮತ್ತು ದುರ್ಗಾ ಸಂಜೀವನಿ ಮಣಿಪಾಲ ಆಸ್ಪತ್ರೆ ಕಟೀಲಿನಲ್ಲಿರುವ ಕೌಂಟರ್‌ಗಳಲ್ಲಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉತ್ತರ ಕೇರಳದಾದ್ಯಂತ ಇರುವ ನಮ್ಮ ಅಧಿಕೃತ ಪ್ರತಿನಿಧಿಗಳ ಮೂಲಕ ಮಾಡಿಕೊಳ್ಳಬಹುದು” ಎಂದು ತಿಳಿಸಿದರು.

ಮಣಿಪಾಲ ಆರೋಗ್ಯ ಕಾರ್ಡಿನ ಬಗ್ಗೆ ಹಾಗೂ ಜಿಲ್ಲೆಯಾದ್ಯಂತ ಇರುವ ನಮ್ಮ ಅಧಿಕೃತ ಪ್ರತಿನಿಧಿಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ 0824-2285214, 7022078002 ಗೆ ಕರೆ ಮಾಡಬಹುದು.
ಪತ್ರಿಕಾ ಮತ್ತು ಮಾಧ್ಯಮ ಸದಸ್ಯರಿಗೆ ಉತ್ತಮ ಆರೋಗ್ಯವನ್ನು ಹಾರೈಸುವ ಸೂಚಕವಾಗಿ ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಮಣಿಪಾಲ ಆರೋಗ್ಯ ಕಾರ್ಡ್ ಅನ್ನು ಹಸ್ತಾಂತರಿಸಿದರು.


Spread the love
Subscribe
Notify of

0 Comments
Inline Feedbacks
View all comments