
ಮಣಿಪಾಲ: ಐಟಿ ಕಂಪೆನಿಯ ಉದ್ಯೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಮಣಿಪಾಲ: ಬೆಂಗಳೂರಿನ ಐಟಿ ಕಂಪೆನಿಯೊಂದರಲ್ಲಿ ಅಕೌಂಟ್ಸ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ವಿದ್ಯಾರತ್ನ ನಗರದಲ್ಲಿ ನಡೆದಿದೆ.
ಮೃತರನ್ನು ಪ್ರಮೋದ್ ಅಂಗಾರ ಜತ್ತನ್ (41) ಎಂದು ಗುರುತಿಸಲಾಗಿದೆ.
ಮೃತ ಪ್ರಮೋದ್ ಅವರು ಬೆಂಗಳೂರಿನ ಕೊನ್ಸೆರೋ ಕಂಪನಿಯಲ್ಲಿ ಅಕೌಂಟ್ಸ್ ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿದ್ದು ಪ್ರಸ್ತುತ ವರ್ಕ್ ಫ್ರಮ್ ಹೋಮ್ ನಲ್ಲಿ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದರು, ಪ್ರಮೋದ್ ಅವರು ಕಛೇರಿ ಕೆಲಸದ ಒತ್ತಡದಿಂದಲೋ ಅಥವಾ ಬೇರೆ ಯಾವುದೋ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಜೂನ್ 24ರ ಸಂಜೆ 06:00 ಗಂಟೆಯಿಂದ ಜೂನ್ 25ರ ಬೆಳಿಗ್ಗೆ 11:00 ಗಂಟೆಯ ಮಧ್ಯಾವಧಿಯಲ್ಲಿ ಮನೆಯ ಬೆಡ್ ರೂಂ ನಲ್ಲಿ ಫ್ಯಾನಿಗೆ ಬೆಡ್ ಶೀಟ್ ನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಪ್ರಮೋದ್ ಅವರ ಪತ್ನಿ ಶ್ರೀಜಾ ವಿ. ಕೋಟ್ಯಾನ್ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಅದರಂತೆ ಪ್ರಕರಣ ದಾಖಲಿಸಲಾಗಿದೆ.