
Spread the love
ಮಣಿಪಾಲ: ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದ ಕಾರು
ಮಣಿಪಾಲ: ಬೆಳ್ಳಂಬೆಳಗ್ಗೆ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಮಣಿಪಾಲದ ಲಕ್ಷ್ಮೀಂದ್ರನಗರದ ಬಳಿ ನಡೆದಿದೆ.
ಕಾರಿನಲ್ಲಿದ್ದವರ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ
ಬೆಳಿಗ್ಗೆಯಿಂದ ಮಳೆ ಸುರಿಯುತ್ತಿದ್ದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವ್ಯೆಡರ್ ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ ಎನ್ನಲಾಗಿದೆ.
ಮಳೆಯಿಂದ ರಸ್ತೆಯ ಬಲಭಾಗದಲ್ಲಿ ನೀರು ತುಂಬಿದ್ದು ಇದು ಕೂಡ ಅಪಘಾತ ಸಂಭವಿಸಲು ಕಾರಣವಿರಬಹುದು ಎನ್ನಲಾಗಿದೆ.
ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಡಿಕ್ಕಿಯ ರಭಸಕ್ಕೆ ಕಾರಿನ ಬೊನೆಟ್ ಹಾಗೂ ಬಂಪರ್ ಕಿತ್ತು ಹೋಗಿದೆ.
Spread the love