ಮಣಿಪಾಲ: ಸಾರ್ವಜನಿಕ ರಸ್ತೆಯಲ್ಲಿ ಕಾರಿನ ಮೇಲೆ ಪಟಾಕಿಯನ್ನು ಇಟ್ಟು ಸಿಡಿಸಿದ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲು

Spread the love

ಮಣಿಪಾಲ: ಸಾರ್ವಜನಿಕ ರಸ್ತೆಯಲ್ಲಿ ಕಾರಿನ ಮೇಲೆ ಪಟಾಕಿಯನ್ನು ಇಟ್ಟು ಸಿಡಿಸಿದ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲು

ಉಡುಪಿ: ಕಾರಿನ ಮೇಲೆ ಪಟಾಕಿಯನ್ನು ಇಟ್ಟು ಸಿಡಿಸಿದ ವ್ಯಕ್ತಿಯ ವಿರುದ್ದ ಮಣಿಪಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮಣಿಪಾಲ ವಿಪಿ ನಗರದ ಸೆಲೂನ್ ನಲ್ಲಿ ಕೆಲಸ ಮಾಡಿಕೊಂಡಿರುವ ವಿಶಾಲ್ ಕೊಹ್ಲಿ (26) ಎಂಬಾತನ ಮೇಲೆ ಪ್ರಕರಣ ದಾಖಲಾಗಿದೆ.

ಅಕ್ಟೋಬರ್ 25ರಂದು ರಾತ್ರಿ 9.30 ರ ಹೊತ್ತಿಗೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಳ್ಳಿ ಡಾ. ವಿ ಎಸ್ ಆಚಾರ್ಯ ರಸ್ತೆಯಲ್ಲಿ ಕಾರು ನಂಬ್ರ ಕೆ.ಎ20 9232 ರಲ್ಲಿ ವಿಶಾಲ್ ಕಾರನ್ನು ನಿರ್ಲಕ್ಷ್ಯತನ, ಅಜಾಗರುಕತೆ ಹಾಗೂ ಅಪಾಯಕಾರಿ ರೀತಿಯಲ್ಲಿ ಚಲಾಯಿಸಿ ಕಾರಿನ ಮೇಲ್ಗಡೆ ಪಟಾಕಿ ಇಟ್ಟು ಸಿಡಿಸಿ ಮನುಷ್ಯನ ಪ್ರಾಣಕ್ಕೆ ಅಪಾಯವಾಗುವ ರೀತಿಯಲ್ಲಿ ಕೃತ್ಯ ಎಸಗಿದ್ದು, ಈ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರವಾಗಿದ್ದವು.

ಈ ಕೃತ್ಯದಲ್ಲಿ ಭಾಗಿಯಾದ ಆರೋಪಿ ಮತ್ತು ವಾಹನ ಪತ್ತೆಗೆ ಅಕ್ಷಯ್ ಎಂ ಹಾಕೆ ಎಸ್ಪಿ ಉಡುಪಿ ಅವರ ಮಾರ್ಗದರ್ಶನದಲ್ಲಿ ಮಣಿಪಾಲ ಪೊಲೀಸ್ ಠಾಣಾ ಪಿ ಎಸ್ ಐ ರಾಜಶೇಖರ ವಂದಲಿ, ಶೈಲೇಶ್ ಎ ಎಸ್ ಐ ಮತ್ತು ಹೆಡ್ ಕಾನ್ಸ್ಟೇಬಲ್ ಪ್ರಸನ್ನ ಅವರು ಅಕ್ಟೋಬರ್ 27ರಂದು ಆರೋಪಿಯನ್ನು ಕಾರು ಸಮೇತ ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love