ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ಚುನಾವಣಾ ಆಯೋಗ ಗಂಭೀರವಾಗಿ ಚಿಂತಿಸಲಿ – ಮಂಜುನಾಥ ಭಂಡಾರಿ

Spread the love

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ಚುನಾವಣಾ ಆಯೋಗ ಗಂಭೀರವಾಗಿ ಚಿಂತಿಸಲಿ – ಮಂಜುನಾಥ ಭಂಡಾರಿ

ಕುಂದಾಪುರ: ಮತದಾರರ ಪಟ್ಟಿ ಪರಿಷ್ಕರಣೆ ನೆಪದಲ್ಲಿ ನಡೆಯುವ ಸೇರ್ಪಡೆ ಹಾಗೂ ತೆಗೆಯುವಿಕೆಯ ಪ್ರಕ್ರಿಯೆಯಲ್ಲಿ ನಡೆದಿರುವ ಅವ್ಯವಹಾರಗಳ ಕುರಿತು ಚುನಾವಣಾ ಆಯೋಗ ಗಂಭೀರ ಚಿಂತನೆಗಳನ್ನು ನಡೆಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದರು.

ಕುಂದಾಪುರದ ಆರ್.ಎನ್. ಶೆಟ್ಟಿ ಮಿನಿ ಹಾಲ್ ನಲ್ಲಿ ಮಂಗಳವಾರ ನಡೆದ ಸ್ಥಳೀಯಾಡಳಿತ ಸದಸ್ಯರ ಮತ್ತು ಕಾರ್ಯಕರ್ತರ ಭೇಟಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ಕುರಿತಂತೆ ಕೆಪಿಸಿಸಿ ಉಡುಪಿ ಜಿಲ್ಲೆಗೆ ನನ್ನನ್ನು ಬಿಎಲ್‌ಓ ಆಗಿ ನೇಮಿಸಿದೆ. ಜಿಲ್ಲೆಯ ಮತದಾರರ ಪಟ್ಟಿಯ ಸಮಗ್ರ ಪರಿಶೀಲನೆ ಮಾಡುವ ಕೆಲಸ ಪಕ್ಷದಿಂದ ಆಗಲಿದೆ. ಯಾವುದೆ ಅರ್ಹ ಮತದಾರರನ ಹೆಸರು ಪಟ್ಟಿಯಿಂದ ಹೊರ ಹೋಗದಂತೆ ನೋಡಿಕೊಳ್ಳಬೇಕು. ಇದಕ್ಕಾಗಿ ಪ್ರತಿ ಬೂತ್‌ಗೂ ಇಬ್ಬರು ಬಿಎಲ್‌ಓ ಗಳ ನೇಮಕಾತಿ ಮಾಡಲಾಗುತ್ತದೆ. ಈಗಾಗಲೇ 77 ಜಿ.ಪಂ. ಕ್ಷೇತ್ರಗಳಲ್ಲಿ ಕಾರ್ಯಕರ್ತರ, ನಾಯಕರ ಸಭೆ ನಡೆಸಲಾಗಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ್ ಕೂಡವೂರು, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಪಕ್ಷದ ಪ್ರಮುಖರಾದ ಕಿಶನ್ ಹೆಗ್ಡೆ ಕೊಳ್ಕೆಬೈಲು, ದಿನೇಶ್ ಹೆಗ್ಡೆ ಮೊಳಹಳ್ಳಿ, ಕೆ.ವಿಕಾಸ್ ಹೆಗ್ಡೆ, ಶ್ಯಾಮಲಾ ಭಂಡಾರಿ, ಅಶೋಕ್‌ ಪೂಜಾರಿ ಬೀಜಾಡಿ, ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಪ್ರಸನ್ನ ಕುಮಾರ್ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕ್ರಾಸ್ಟೊ, ಗಂಗಾಧರ ಶೆಟ್ಟಿ ಹೇರಿಕುದ್ರು, ಮಮತಾ ದೇವಾಡಿಗ ಇದ್ದರು.


Spread the love