ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ: ಮತಗಟ್ಟೆ ಅಧಿಕಾರಿಗಳನ್ನು ಸಂಪರ್ಕಿಸಿ – ಡಾ. ಕುಮಾರ್ 

Spread the love

ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ: ಮತಗಟ್ಟೆ ಅಧಿಕಾರಿಗಳನ್ನು ಸಂಪರ್ಕಿಸಿ – ಡಾ. ಕುಮಾರ್ 

ಮಂಗಳೂರು: ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಅಥವಾ ಯಾವುದೇ ಬದಲಾವಣೆಗಳಿದ್ದರೆ ಹತ್ತಿರದ ಮತಗಟ್ಟೆ ಅಧಿಕಾರಿಗಳನ್ನು ಸಂಪರ್ಕಿಸಿ ಸರಿಪಡಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ತಿಳಿಸಿದರು.

ಅವರು ಡಿ.5ರ ಸೋಮವಾರ ಚೇಳ್ಯಾರು ಸಮೀಪದ ಮಧ್ಯ ಕೊರಗರ ಕಾಲನಿ ಭೇಟಿ ನೀಡಿ ಮಾತನಾಡಿದರು. ಮತದಾರರ ಪಟ್ಟಿಯಲ್ಲಿ ಹೆಸರಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು, ಮತದಾನದ ದಿವಸದಂದು ಯಾವುದೇ ಬದಲಾವಣೆಗೆ ಅವಕಾಶ ಇಲ್ಲ ಎಂದ ಅವರು ಕೊರಗರ ಸಮುದಾಯದ ಸಮಸ್ಯೆ ಅಳಿಸಿ, ಅವರ ಮನೆಗಳಿಗೆ ಭೇಟಿ ನೀಡಿದರು

ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಶ್ಮಿ, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಮನಿμï, ಚೇಳ್ಯಾರು ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿತ್ಯಾನಂದ, ಸ್ವೀಪ್ ಸಮಿತಿ ಸದಸ್ಯರಾದ ಭಾಗೀರಥಿ, ಡೊಂಬಯ್ಯ ಇಡ್ಕಿದು ಉಪಸ್ಥಿತರಿದ್ದರು.


Spread the love