ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿದ ವ್ಯಕ್ತಿಯ ಬಂಧನ

Spread the love

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿದ ವ್ಯಕ್ತಿಯ ಬಂಧನ

ಬಂಟ್ವಾಳ: ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಟ್ವಾಳ ಮಹಿಳಾ ಠಾಣಾ ಪೋಲಿಸರು ಬಂಧಿಸಿದ್ದಾರೆ.

ಬಂಧಿತನನ್ನು ಪುತ್ತೂರು ನಿವಾಸಿ ರಿಕ್ಷಾ ಚಾಲಕ ರವಿ ಎಂದು ಗುರುತಿಸಲಾಗಿದೆ.

ಆರೋಪಿಯು ಬಂಟ್ವಾಳ ತಾಲೂಕಿನ ಈಡ್ಕಿದು ಗ್ರಾಮದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯಿಂದ ಚಿನ್ನಾಭರಣ ಹಾಗೂ ರೂ 70000 ನಗದು ಪಡೆದು ವಂಚಿಸಿದ್ದಲ್ಲದೆ, ಬಲವಂತವಾಗಿ ಅತ್ಯಾಚಾರವೆಸಗಿ ಮೋಸ ಮಾಡಿದ್ದು ಮಹಿಳೆಯ ಈ ಬಗ್ಗೆ ದೂರು ದಾಖಲಿಸಿದ್ದು ಅದರಂತೆ ಬಂಟ್ವಾಳ ಠಾಣಾ ಪೋಲಿಸರು ಬಂಧಿಸಿದ್ದಾರೆ.


Spread the love