ಮದುವೆ, ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಅವಶ್ಯಕತೆ ಇಲ್ಲ: ಮಮತಾ ದೇವಿ ಜಿ.ಎಸ್

Spread the love

ಮದುವೆ, ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಅವಶ್ಯಕತೆ ಇಲ್ಲ: ಮಮತಾ ದೇವಿ ಜಿ.ಎಸ್

ಉಡುಪಿ: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ದೈವಾರ್ಷಿಕ ಚುನಾವಣಾ ಕ್ಷೇತ್ರಕ್ಕೆ ಉಪಚುನಾವಣೆ ನೀತಿ ಸಂಹಿತೆಯ ಪ್ರಯುಕ್ತ ಸಾರ್ವಜನಿಕರು ಮದುವೆ ಮತ್ತು ಇನ್ನಿತರ ಖಾಸಗಿ ಕಾರ್ಯಕ್ರಮಗಳನ್ನು ನಡೆಸಲು ಅನುಮತಿಯನ್ನು ಪಡೆಯುವ ಅವಶ್ಯಕತೆ ಇರುವುದಿಲ್ಲ.ಆದರೆ ಸದ್ರಿ ಸಭೆ, ಸಮಾರಂಭಗಳಲ್ಲಿ ಯಾವುದೇ ರೀತಿಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆಗಳನ್ನು ಉಲ್ಲಂಘನೆಯಾಗದಂತೆ ಆಯೋಜಕರು ನೋಡಿಕೊಳ್ಳಬೇಕು ಎಂದು ಉಡುಪಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದ್ದಾರೆ.

ಭಾರತ ಚುನಾವಣಾ ಆಯೋಗವು ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ದೈವಾರ್ಷಿಕ ಚುನಾವಣಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಸುವ ಬಗ್ಗೆ ಚುನಾವಣಾ ವೇಳಾಪಟ್ಟಿಯ ಅಧಿಸೂಚನೆ ಹೊರಡಿಸಿದ್ದು ಅದರಂತೆ ಮಾದರಿ ನೀತಿ ಸಂಹಿತೆ ಜ್ಯಾರಿಯಲ್ಲಿರುತ್ತದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ತಡೆಗಟ್ಟುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ವಿವಿಧ ತಂಡಗಳನ್ನು ರಚಿಸಲಾಗಿದ್ದು, ಸದರಿ ಚುನಾವಣೆಯ ಮಾದರಿ ನೀತಿ ಸಂಹಿತೆಯು ಅಕ್ಟೋಬರ್ 28 ರ ವರೆಗೆ ಜ್ಯಾರಿಯಲ್ಲಿರುತ್ತದೆ

ಜಿಲ್ಲೆಯ ವ್ಯಾಪ್ತಿಯಲ್ಲಿ ಚುನಾವಣಾ ಸಭೆ, ಸಮಾರಂಭಗಳು ನಡೆಸುವ ಬಗ್ಗೆ ಮತ್ತು ಚುನಾವಣಾ ವಾಹನ ಪ್ರಚಾರದ ಬಗ್ಗೆ ಜಿಲ್ಲೆಯೊಳಗೆ ಸಂಚರಿಸಲು ಅನುಮತಿಯನ್ನು ಕೋರಿ ಬರುವಂತಹ ಅರ್ಜಿಗಳನ್ನು ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಅಪರ ಜಿಲ್ಲಾಧಿಕಾರಿಗಳು ಉಡುಪಿ ರವರ ಜಿಲ್ಲಾಧಿಕಾರಿಗಳ ಕಛೇರಿಯ ಏಕಗವಾಕ್ಷಿ ಕೇಂದ್ರದಲ್ಲಿ ಪಡೆದುಕೊಳ್ಳಬಹುದಾಗಿದೆ.

11-ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣಾ ಕ್ಷೇತ್ರ ವ್ಯಾಪ್ತಿ ಸಂಬಂದಿಸಿದಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಎರಡು ಕಡೆಯಲ್ಲಿ ಪ್ರಚಾರ ಕಾರ್ಯ ಕೈಗೊಳ್ಳಲು ಸ್ಪರ್ಧಿಸುವ ಅಭ್ಯರ್ಥಿ ಮತ್ತು ಅಭ್ಯರ್ಥಿ ಪರ ಎಜೆಂಟರಿಗೆ ಮಾತ್ರ ಸಂಚಾರಿಸಲು 11-ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣಾ ಕ್ಷೇತ್ರದ ಚುನಾವಣಾಧಿಕಾರಿಯವರ ಈ ಕಛೇರಿಯ 1ನೇ ಮಹಡಿಯಲ್ಲಿ ತೆರಯಲಾದ ಏಕಗವಾಕ್ಷಿ ಕೇಂದ್ರದಲ್ಲಿ ಮುಂಚಿತವಾಗಿ ಮಾಹಿತಿಯನ್ನು ನೀಡಿ ಹಾಗೂ ಅರ್ಜಿಯನ್ನು ಸಲ್ಲಿಸಿ ಅನುಮತಿಯನ್ನು ಪಡೆದುಕೊಳ್ಳಬಹುದು.
ರಾಜಕೀಯ ರಹಿತವಾದ ಇತರೇ ಸಾರ್ವಜನಿಕ, ಸಭೆ ಸಮಾರಂಭಗಳನ್ನು ನಡೆಸುವ ಅಯೋಜಕರು ಜಿಲ್ಲೆಯ ಎಲ್ಲಾ ತಾಲೂಕು ಕಛೇರಿಯ ಏಕಗವಾಕ್ಷಿ ಕೇಂದ್ರದಲ್ಲಿ ಮುಂಚಿತವಾಗಿ ಮಾಹಿತಿಯನ್ನು ನೀಡಿ, ಅರ್ಜಿ ಸಲ್ಲಿಸಿ, ತಾಲೂಕು ತಹಶೀಲ್ದಾರರಿಂದ ಅನುಮತಿಯನ್ನು ಪಡೆದುಕೊಳ್ಳಬಹುದಾಗಿದೆ.

ಸಾರ್ವಜನಿಕರು ಮದುವೆ ಮತ್ತು ಇನ್ನಿತರ ಖಾಸಗಿ ಕಾರ್ಯಕ್ರಮಗಳನ್ನು ನಡೆಸಲು ಅನುಮತಿಯನ್ನು ಪಡೆಯುವ ಅವಶ್ಯಕತೆ ಇರುವುದಿಲ್ಲ.ಆದರೆ ಸದ್ರಿ ಸಭೆ, ಸಮಾರಂಭಗಳಲ್ಲಿ ಯಾವುದೇ ರೀತಿಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆಗಳನ್ನು ಉಲ್ಲಂಘನೆಯಾಗದಂತೆ ಆಯೋಜಕರು ನೋಡಿಕೊಳ್ಳಬೇಕು.

ಆದ್ದರಿಂದ ಸಾರ್ವಜನಿಕರು ಯಾವುದೇ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಸಹಕರಿಸಬೇಕು ಎಂದು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು ಆಗಿರುವ ಉಡುಪಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ


Spread the love
Subscribe
Notify of

0 Comments
Inline Feedbacks
View all comments