ಮದ್ಯಪ್ರದೇಶದ ಬಾಲಕಿಯ ಮೇಲಿನ ಅತ್ಯಾಚಾರ; ಆರೋಪಿಗೆ ಕಠಿಣ ಶಿಕ್ಷೆ ನೀಡಲು ಉಡುಪಿ ಜಿಲ್ಲಾ ಎನ್ಎಸ್ ಯುಐ ಆಗ್ರಹ

Spread the love

ಮದ್ಯಪ್ರದೇಶದ ಬಾಲಕಿಯ ಮೇಲಿನ ಅತ್ಯಾಚಾರ; ಆರೋಪಿಗೆ ಕಠಿಣ ಶಿಕ್ಷೆ ನೀಡಲು ಉಡುಪಿ ಜಿಲ್ಲಾ ಎನ್ಎಸ್ ಯುಐ ಆಗ್ರಹ

ಉಡುಪಿ: ಮದ್ಯಪ್ರದೇಶದ 7 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಬಳಿಕ ಆಕೆಯ ಕತ್ತು ಸೀಳಿದ ಪ್ರಕರಣವನ್ನು ಉಡುಪಿ ಜಿಲ್ಲಾ ಎನ್.ಎಸ್.ಯು.ಐ ಘಟಕ ತೀವ್ರವಾಗಿ ಖಂಡಿಸಿದ್ದು , ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದೆ.

ದೇಶದಲ್ಲಿ ಮಹಿಳೆಯರು ಮತ್ತು ಹಸುಳೆಗಳ ಮೇಲೆ ನಿತ್ಯ ನಿರಂತರ ದೌರ್ಜನ್ಯಗಳು ನಡೆಯುತ್ತಿದ್ದ ಇದಕ್ಕೆ ಕಡಿವಾಣ ಹಾಕುವ ಅಗತ್ಯತೆ ಇದೆ. ಅದರಲ್ಲೂ ಮಧ್ಯಪ್ರದೇಶ ಮಹಿಳೆಯರ ಅತ್ಯಾಚಾರ ಪ್ರಕರಣದಲ್ಲಿ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಮಧ್ಯಪ್ರದೇಶದಲ್ಲಿ ಆಡಳಿತ ನಡೆಸುತ್ತಿರುವ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಸರಕಾರ ಮಹಿಳೆಯರಿಗೆ ಹಾಗೂ ಹೆಣ್ಣುಮಕ್ಕಳಿಗೆ ರಕ್ಷಣೆ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ.

ಅತ್ಯಾಚಾರ ಪ್ರಕರಣದಲ್ಲಿ ಯಾವುದೇ ಧರ್ಮ ಜಾತಿಯ ವ್ಯಕ್ತಿ ಆರೋಪಿಯಾಗಿದ್ದರೂ ಕೂಡ ಯಾವುದೇ ರೀತಿಯ ಒತ್ತಡಕ್ಕೆ ಒಳಗಾಗದೆ ಅಲ್ಲಿನ ಸರಕಾರ ಮತ್ತು ಆಡಳಿತ ವ್ಯವಸ್ಥೆ ಆರೋಪಿಗೆ ಕಠಿಣವಾದ ಶಿಕ್ಷೆಯನ್ನು ವಿಧಿಸಬೇಕು. 7 ವರ್ಷದ ಮುಗ್ದ ಹಸುಳೆಯನ್ನು ಮೃಗೀಯ ರೀತಿಯಲ್ಲಿ ಅತ್ಯಾಚಾರವೆಸಗಿ ಆಕೆಯ ಕತ್ತು ಸೀಳಿದ ಆರೋಪಿಗೆ ಕಠಿಣ ಶಿಕ್ಷೆ ನೀಡುವುದರ ಮೂಲಕ ಆ ಮುಗ್ದ ಜೀವಕ್ಕೆ ನ್ಯಾಯದೊರಕಿಸುವ ಕೆಲಸ ನಡೆಯಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅತ್ಯಾಚಾರ ಪ್ರಕರಣಗಳನ್ನು ತಡೆಗಟ್ಟಲು ದೃಢ ಕಾನೂನುಗಳನ್ನು ರೂಪಿಸುವುದು. ಮತ್ತು ಇರುವ ಕಾನೂನುಗಳನ್ನು ಪರಿಣಾಮಕಾರಿಯಾಗಿ ಜಾರಿಗೂಳಿಸಿ ಅತ್ಯಾಚಾರಕ್ಕೊಳಗಾದವರಿಗೆ ತ್ವರಿತಗತಿಯಲ್ಲಿ ನ್ಯಾಯಕೊಡಿಸಲು ಮುಂದಾಗಬೇಕು. ಅತ್ಯಾಚಾರ ನಡೆಸಿರುವವರನ್ನು ಕಠಿಣ ಶಿಕ್ಷೆಗೊಳಪಡಿಸಿ ಅದನ್ನು ಬಹಿರಂಗಪಡಿಸಬೇಕು ಎಂದು ಜಿಲ್ಲಾ ಎನ್ ಎಸ್ ಯು ಐ ಅಧ್ಯಕ್ಷ ಕ್ರಿಸ್ಟನ್ ಡಿ’ಆಲ್ಮೇಡಾ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.


Spread the love