ಮದ್ರಸಾಗೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಇರಿತ

Spread the love

ಮದ್ರಸಾಗೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಇರಿತ

ಮಂಗಳೂರು: ಮದ್ರಸಾ ವಿದ್ಯಾರ್ಥಿಗೆ ಚೂರಿಯಿಂದ ಇರಿದ ಘಟನೆ ಮಂಜನಾಡಿ ಸಮೀಪದ ಕೈರಂಗಳ ಜಲ್ಲಿಕ್ರಾಸ್ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.

ಕೈರಂಗಳ ಜಲ್ಲಿಕ್ರಾಸ್ ಮಯ್ಯದ್ಧಿ ಎಂಬವರ ಪುತ್ರ ರಾಝಿಕ್ (10) ಎಂಬಾತ ತೋಟಾಲು ಮದ್ರಸಕ್ಕೆ ನಡೆದುಕೊಂಡು ಹೋಗುತ್ತಿದ್ದಾಗ ದಾರಿಕೇಳು ನೆಪದಲ್ಲಿ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಚೂರಿಯಿಂದ ಕೈಗೆ ಇರಿದು ಪರಾರಿಯಾಗಿದ್ದಾರೆ. ಗಾಯಗೊಂಡ ರಾಝಿಕ್ ನನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

madrasa-student-stabbed-by-unidentified-bikers-3 madrasa-student-stabbed-by-unidentified-bikers-2 madrasa-student-stabbed-by-unidentified-bikers-1

ಕೊಣಾಜೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ನಾಲ್ಕು ದಿನಗಳಿಂದ ಅಹಿತಕರ ಘಟನೆಗಳು ನಡೆದ ಹಿನ್ನಲೆಯಲ್ಲಿ ಬಿಗು ಪೋಲಿಸ್ ಬಂದೋಬಸ್ತು ಹಾಕಿದ್ದು, ಮಂಗಳುರು ಪೋಲಿಸ್ ಆಯುಕ್ತರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ. ಆದರೂ ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಹಲ್ಲೆ ನಡೆಸಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.


Spread the love