ಮನಪಾ ಆಯುಕ್ತರಾಗಿ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ

Spread the love

ಮನಪಾ ಆಯುಕ್ತರಾಗಿ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಆಯುಕ್ತರನ್ನಾಗಿ ಹಿರಿಯ ಕೆಎಎಸ್ ಅಧಿಕಾರಿ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.

ಮನಪಾ ಆಯುಕ್ತರಾಗಿದ್ದ ಮುಹಮ್ಮದ್ ನಝೀರ್ ವರ್ಗಾವಣೆಯಿಂದ ತೆರವಾದ ಹುದ್ದೆಗೆ ಅಜಿತ್‌ ಕುಮಾರ್ ಅವರನ್ನು ನೇಮಕಗೊಳಿಸಲಾಗಿದೆ.

ಅಜಿತ್‌ ಕುಮಾರ್ ಈ ಮೊದಲು ಬೆಂಗಳೂರಿನ ಜಲಾನಯನ ಅಭಿವೃದ್ಧಿ ಇಲಾಖೆಯ ಅಪರ ನಿರ್ದೇಶಕ ಹಾಗೂ ಮುಖ್ಯ ಲೆಕ್ಕಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.


Spread the love