ಮನಪಾ ಚುನಾವಣೆ: ನಾಲ್ಕು ಕಡೆ ಸಿಪಿಐ ಸ್ಪರ್ಧೆ

ಮನಪಾ ಚುನಾವಣೆ: ನಾಲ್ಕು ಕಡೆ ಸಿಪಿಐ ಸ್ಪರ್ಧೆ

ಮಂಗಳೂರು: ಭಾರತ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ಮಂಗಳೂರು ತಾಲೂಕು ಸಮಿತಿಯು ಜಿಲ್ಲಾ ಕಾರ್ಯದರ್ಶಿ ವಿ. ಕುಕ್ಯಾನ್ ಅಧ್ಯಕ್ಷತೆಯಲ್ಲಿ ನಗರದಲ್ಲಿ ಮಂಗಳವಾರ ಸಭೆ ನಡೆಯಿತು. ಚುನಾವಣೆಯಲ್ಲಿ ಒಟ್ಟು ನಾಲ್ಕು ಕಡೆ ಸ್ಪರ್ಧಿಸಲು ಸಭೆ ತೀರ್ಮಾನಿಸಿತು.

ಸಭೆಯಲ್ಲಿ ಮುಂಬರುವ ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆ ಹಾಗೂ ಅದರಲ್ಲಿ ಸಿಪಿಐ ಭಾಗವಹಿಸುವಿಕೆ ಬಗ್ಗೆ ಚರ್ಚೆ ನಡೆಸಿತು. ಚುನಾವಣೆಗಳಲ್ಲಿ ಕಾರ್ಯಕರ್ತರು ಪಕ್ಷದ ಅಭ್ಯರ್ಥಿಗಳು ಜಯಗಳಿಸುವಂತೆ ಸರ್ವಪ್ರಯತ್ನ ನಡೆಸಬೇಕೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಸಿಪಿಐ ತಾಲೂಕು ಕಾರ್ಯದರ್ಶಿ ಸೀತಾರಾಮ ಬೇರಿಂಜೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave a Reply

  Subscribe  
Notify of