ಮನಪಾ ಜಂಟಿ ನಿರ್ದೇಶಕ ಕೆ.ವಿ. ಜಯರಾಜ್ ಮನೆ ಮೇಲೆ ಎಸಿಬಿ ದಾಳಿ

Spread the love

ಮನಪಾ ಜಂಟಿ ನಿರ್ದೇಶಕ ಕೆ.ವಿ. ಜಯರಾಜ್ ಮನೆ ಮೇಲೆ ಎಸಿಬಿ ದಾಳಿ

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಜಂಟಿ ನಿರ್ದೇಶಕ ಕೆ.ವಿ. ಜಯರಾಜ್ ಮನೆ ಮೇಲೆ ಎಸಿಬಿ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.

ಜಯರಾಜ್ ಅವರ ಬಿಜೈ ಬಳಿ ಇರುವ ಮನೆ ಮೇಲೆ ಮಂಗಳವಾರ ಬೆಳಗ್ಗೆ ಎಸಿಬಿ ಎಸಿಬಿ ಎಸ್ಪಿ ಬೋಪಯ್ಯ ನೇತೃತ್ವದ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ಮುಂದುವರಿದಿದೆ. ಇದರ ಜೊತೆಗೆ ಅವರ ಕಚೇರಿ, ನಗರದ ಪಡೀಲ್ ಬಳಿಯ ಜಯರಾಜ್ ತಂದೆಯ ಮನೆ, ಕೇರಳದಲ್ಲಿರುವ ಜಯರಾಜ್ ಪತ್ನಿಯ ಮನೆ ಮೇಲೂ ದಾಳಿ ನಡೆಸಿದ್ದು, ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಾರ್ಯಾಚರಣೆಯಲ್ಲಿ ಎಸಿಬಿ ಎಸ್ಪಿ ಬೋಪಯ್ಯ, ಡಿವೈಎಸ್ಪಿ ಕೆ.ಸಿ.ಪ್ರಕಾಶ್ ಇನ್ಸ್ಪೆಕ್ಟರ್ ಗಳಾದ ಶ್ಯಾಂಸುಂದರ್, ಗುರುರಾಜ್ ಹಾಗೂ ಸಿಬ್ಬಂದಿ ಇದ್ದಾರೆ.


Spread the love